ಮುಂಬೈ: ದೆಹಲಿಯಿಂದ ಪುಣೆಗೆ ಶುಕ್ರವಾರ ಪ್ರಯಾಣಿಸುತ್ತಿದ್ದ ಏರ್ ಇಂಡಿಯಾ ವಿಮಾನಕ್ಕೆ ಹಕ್ಕಿ ಡಿಕ್ಕಿ ಹೊಡೆದ ಪರಿಣಾಮ ವಿಮಾನಯಾನ ಸಂಸ್ಥೆಯು ಪುಣೆಯಿಂದ ದೆಹಲಿಗೆ ನಿಗದಿತ ಪ್ರಯಾಣವನ್ನು ರದ್ದುಗೊಳಿಸಿದೆ.
ವಿಮಾನವು ಸುರಕ್ಷಿತವಾಗಿ ಪುಣೆಯಲ್ಲಿ ಇಳಿಯಿತು. ಇಳಿದ ನಂತರ ಹಕ್ಕಿ ಡಿಕ್ಕಿ ಹೊಡೆದಿರುವುದು ಪತ್ತೆಯಾಗಿದೆ ಎಂದು ವಿಮಾನಯಾನ ಸಂಸ್ಥೆ ಪ್ರಕಟಣೆಯಲ್ಲಿ ತಿಳಿಸಿದೆ.
'ಜೂನ್ 20ರಂದು ಪುಣೆಯಿಂದ ದೆಹಲಿಗೆ ತೆರಳಲು ನಿಗದಿಯಾಗಿದ್ದ AI2470 ವಿಮಾನವು ಪಕ್ಷಿ ಡಿಕ್ಕಿ ಹೊಡೆದ ಕಾರಣ ರದ್ದುಗೊಂಡಿದೆ. ವಿಮಾನವು ಪುಣೆಯಲ್ಲಿ ಸುರಕ್ಷಿತವಾಗಿ ಇಳಿದ ನಂತರ ಎಂಜಿನಿಯರಿಂಗ್ ತಂಡವು ವ್ಯಾಪಕ ತಪಾಸಣೆ ನಡೆಸುತ್ತಿದೆ. ವಿಮಾನದಲ್ಲಿದ್ದ ಎಲ್ಲ ಪ್ರಯಾಣಿಕರಿಗೆ ವಸತಿ ಸೌಕರ್ಯ ಒದಗಿಸುವುದು ಸೇರಿದಂತೆ ಎಲ್ಲ ವ್ಯವಸ್ಥೆಗಳನ್ನು ಮಾಡಲಾಗುತ್ತಿದೆ' ಎಂದು ತಿಳಿಸಿದೆ.
ಟಿಕೆಟ್ ರದ್ದತಿ, ಮರುನಿಗದಿ, ಮರುಪಾವತಿ ಆಯ್ಕೆಯನ್ನು ಪ್ರಯಾಣಿಕರಿಗೆ ನೀಡಲಾಗುತ್ತಿದೆ. ಅಲ್ಲದೇ ಪ್ರಯಾಣಿಕರನ್ನು ದೆಹಲಿಗೆ ಕರೆದೊಯ್ಯಲು ಪರ್ಯಾಯ ವ್ಯವಸ್ಥೆಗಳನ್ನು ಮಾಡಲಾಗುತ್ತಿದೆ ಎಂದೂ ವಿಮಾನಯಾನ ಸಂಸ್ಥೆ ತಿಳಿಸಿದೆ.
ಜೂನ್ 12 ರಂದು ಪ್ರಯಾಣಿಕರು ಮತ್ತು ಸಿಬ್ಬಂದಿ ಸೇರಿ 242 ಜನರನ್ನು ಹೊತ್ತು ಲಂಡನ್‌ಗೆ ತೆರಳುತ್ತಿದ್ದ ಏರ್ ಇಂಡಿಯಾ ವಿಮಾನ AI-171 ಅಹಮದಾಬಾದ್‌ನಲ್ಲಿ ಪತನಗೊಂಡಿತ್ತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.