ADVERTISEMENT

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಧಾರಾಕಾರ ಮಳೆ

ಏಜೆನ್ಸೀಸ್
Published 19 ಜುಲೈ 2020, 1:41 IST
Last Updated 19 ಜುಲೈ 2020, 1:41 IST
   

ನವದೆಹಲಿ: ರಾಜಧಾನಿಯಲ್ಲಿ ಭಾನುವಾರ ಬೆಳಿಗ್ಗೆಯಿಂದ ಧಾರಾಕಾರ ಮಳೆ ಸುರಿಯುತ್ತಿದ್ದು,ಹಲವು ತಗ್ಗಿನ ಸ್ಥಳಗಳಲ್ಲಿ ನೀರು ನುಗ್ಗಿದೆ.

ರೈಲು ಭವನ ಪ್ರದೇಶ, ತೀನ್‌ ಮೂರ್ತಿ ಬಜಾರ್‌ ಸೇರಿದಂತೆ ಹಲವು ಪ್ರದೇಶಗಳಲ್ಲಿ ಮಳೆ ಸುರಿಯುತ್ತಿದ್ದು ವಾಯು ವಿಹಾರ ಮಾಡುವವರಿಗೆ ತೊಂದರೆಯಾಗಿದೆ.

ಭಾರಿ ಮಳೆಗೆ ಹಲವು ಭಾಗಗಳಲ್ಲಿ ಸಂಚಾರ ಅಸ್ತವ್ಯಸ್ಥವಾಗಿದೆ. ಟ್ರಾಫಿಕ್‌ಜಾಮ್‌ನಿಂದಾಗಿ ವಾಹನಗಳು ರಸ್ತೆಯಲ್ಲಿ ನಿಂತಿವೆ. ಸಂಚಾರ ಪೊಲೀಸರು ಸುಗಮ ಸಂಚಾರಕ್ಕೆ ಅನುವು ಮಾಡಿಕೊಡಲು ಹರಸಾಹಸ ಪಡುತ್ತಿದ್ದಾರೆ ಎಂದು ಎಎನ್‌ಐ ಸುದ್ದಿ ಸಂಸ್ಥೆ ಟ್ವೀಟ್‌ ಮಾಡಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.