
ದೆಹಲಿಯಲ್ಲಿ ಭಾರಿ ಮಳೆ, ಮುರಿದು ಬಿದ್ದ ವಿದ್ಯುತ್ ಕಂಬ
(ಪಿಟಿಐ ಚಿತ್ರ)
ನವದೆಹಲಿ: ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ ಶನಿವಾರ ರಾತ್ರಿಯಿಂದ ಗುಡುಗು ಸಹಿತ ಭಾರಿ ಮಳೆಯಾಗುತ್ತಿದೆ. ಇದರಿಂದಾಗಿ ವಿಮಾನಯಾನದಲ್ಲಿ ವ್ಯತ್ಯಯ ಉಂಟಾಗಿದೆ.
ಗಾಳಿ, ಮಳೆಗೆ ಹಲವೆಡೆ ವಿದ್ಯುತ್ ಕಂಬಗಳು, ಮರಗಳು ಧರೆಗೆ ಉರುಳಿವೆ. ತಗ್ಗು ಪ್ರದೇಶಗಳಲ್ಲಿ ನೀರು ನಿಂತಿದ್ದು, ಜನಸಾಮಾನ್ಯರಿಗೆ ತೊಂದರೆ ಉಂಟಾಗಿದೆ.
ರಾತ್ರಿ 11.30ರಿಂದ ಬೆಳಿಗ್ಗೆ 5.30ರ ನಡುವೆ 82 ಕಿ.ಮೀ ವೇಗದಲ್ಲಿ ಗಾಳಿ ಬೀಸಿದ್ದು, 81.2 ಮಿ.ಮೀ ಮಳೆಯಾಗಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಪ್ರತಿಕೂಲ ಹವಾಮಾನದಿಂದಾಗಿ ಇಲ್ಲಿನ ಇಂದಿರಾ ಗಾಂಧಿ ಅಂತರರಾಷ್ಟ್ರೀಯ (ಐಜಿಐ) ವಿಮಾನ ನಿಲ್ದಾಣದಲ್ಲಿ ವಿಮಾನಗಳ ಹಾರಾಟದಲ್ಲಿ ವ್ಯತಯ ಉಂಟಾಗಿದೆ. ವಿಮಾನ ನಿಲ್ದಾಣಕ್ಕೆ ಹೋಗುವ ರಸ್ತೆಗಳು ಜಲಾವೃತಗೊಂಡಿವೆ. ಇದರಿಂದಾಗಿ ಪ್ರಯಾಣಿಕರಿಗೂ ತೊಂದರೆ ಎದುರಾಗಿದೆ.
17 ಅಂತರರಾಷ್ಟ್ರೀಯ ಸೇರಿದಂತೆ 49 ವಿಮಾನಗಳ ಹಾರಾಟದಲ್ಲಿ ವ್ಯತ್ಯಯ ಉಂಟಾಗಿದೆ.
ಮೋತಿ ಬಾಗ್, ಮಿಂಟೊ ರಸ್ತೆ, ಕಂಟೋನ್ಮೆಂಟ್, ದೀನ್ ದಯಾಳ್ ಉಪಾಧ್ಯಾ ಮಾರ್ಗ ಸೇರಿದಂತೆ ಹಲವಾರು ಪ್ರದೇಶಗಳ ರಸ್ತೆಗಳಲ್ಲಿ ನೀರು ತುಂಬಿಕೊಂಡಿದ್ದು, ಸವಾರರಿಗೆ ತೊಂದರೆ ಉಂಟಾಗಿದೆ.
ದೆಹಲಿಯ ರಸ್ತೆಗಳಲ್ಲಿ ನೀರು ತುಂಬಿಕೊಂಡಿರುವುದು
ದೆಹಲಿಯಲ್ಲಿ ಭಾರಿ ಮಳೆ: ವಿಡಿಯೊಗಳಲ್ಲಿ ನೋಡಿ...
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.