ADVERTISEMENT

ದೆಹಲಿಯಲ್ಲಿ 26 ವರ್ಷದ ಬಳಿಕ ದಾಖಲೆಯ ಚಳಿ

ಪಿಟಿಐ
Published 29 ಅಕ್ಟೋಬರ್ 2020, 11:27 IST
Last Updated 29 ಅಕ್ಟೋಬರ್ 2020, 11:27 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ನವದೆಹಲಿ: ದೆಹಲಿಯಲ್ಲಿ ಗುರುವಾರ ಕನಿಷ್ಠ ತಾಪಮಾನ 12.5 ಡಿಗ್ರಿ ಸೆಲ್ಸಿಯಸ್‌ಗೆ ಕುಸಿದಿದ್ದು, 26 ವರ್ಷಗಳಲ್ಲಿ ಅಕ್ಟೋಬರ್‌ ತಿಂಗಳಲ್ಲಿ ದಾಖಲಾದ ಅತಿ ಕನಿಷ್ಠ ತಾಪಮಾನ ಇದಾಗಿದೆ ಎಂದು ಭಾರತೀಯ ಹವಾಮಾನ ಇಲಾಖೆ(ಐಎಂಡಿ) ತಿಳಿಸಿದೆ.

ಅಕ್ಟೋಬರ್‌ನಲ್ಲಿ ಸಾಮಾನ್ಯವಾಗಿ 15–16 ಡಿಗ್ರಿ ಕನಿಷ್ಠ ತಾಪಮಾನ ದಾಖಲಾಗುತ್ತದೆ. ಹಿಂದೆ 1994ರ ಅಕ್ಟೋಬರ್ 31ರಂದು ಕನಿಷ್ಠ ತಾಪಮಾನ 12.3 ಡಿಗ್ರಿ ಸೆಲ್ಸಿಯಸ್‌ ದಾಖಲಾಗಿತ್ತು ಎಂದು ಐಎಂಡಿ ಪ್ರಾದೇಶಿಕ ಕೇಂದ್ರದ ಮುಖ್ಯಸ್ಥ ಕುಲ್‌ದೀಪ್‌ ಶ್ರೀವಾಸ್ತವ್‌ ತಿಳಿಸಿದರು.

1937ರ ಅ.31ರಂದು ದೆಹಲಿಯಲ್ಲಿ ಕನಿಷ್ಠ ತಾಪಮಾನ 9.4 ಡಿಗ್ರಿ ಸೆಲ್ಸಿಯಸ್‌ಗೆ ಕುಸಿದಿತ್ತು. ಇದು ಸಾರ್ವಕಾಲಿಕ ದಾಖಲೆ ಎಂದು ಶ್ರೀವಾಸ್ತವ್‌ ತಿಳಿಸಿದರು. ನ.1ರಂದು ತಾಪಮಾನ 11 ಡಿಗ್ರಿ ಸೆಲ್ಸಿಯಸ್‌ಗೆ ಕುಸಿಯುವ ಸಾಧ್ಯತೆ ಇದೆ ಎಂದು ಐಎಂಡಿ ತಿಳಿಸಿದೆ..

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.