
ದೆಹಲಿ ಸ್ಫೋಟ; ಶಂಕಿತನ ಸಿಸಿಟಿವಿ ದೃಶ್ಯ ಸೆರೆ
(ಪಿಟಿಐ ಚಿತ್ರ)
ದೆಹಲಿ: ದೆಹಲಿ ಸ್ಫೋಟದಲ್ಲಿ ಶಂಕಿತ ವ್ಯಕ್ತಿ ಚಾಲನೆ ಮಾಡುತ್ತಿದ್ದ ಹುಂಡೈ ಐ–20 ಕಾರಿನ ವಿಡಿಯೊ ದೃಶ್ಯಗಳು ಸಾಮಾಜಿಕ ಮಾಧ್ಯಮಗಳಲ್ಲಿ ವ್ಯಾಪಕವಾಗಿ ಹರಿದಾಡುತ್ತಿವೆ.
ರಾಷ್ಟ್ರ ರಾಜಧಾನಿ ದೆಹಲಿಯ ಕೆಂಪುಕೋಟೆಯ ಬಳಿ ಸೋಮವಾರ (ನ.10) ಸಂಜೆ ನಡೆದ ಸ್ಫೋಟದಲ್ಲಿ ಮೃತಪಟ್ಟವರ ಸಂಖ್ಯೆ 12ಕ್ಕೆ ಏರಿಕೆಯಾಗಿದೆ. ಘಟನೆಯಲ್ಲಿ ಹಲವರು ಗಾಯಗೊಂಡಿದ್ದಾರೆ.
ಕೆಂಪುಕೋಟೆ ಮೆಟ್ರೊ ನಿಲ್ದಾಣದ ಸಮೀಪದ ಟ್ರಾಫಿಕ್ ಸಿಗ್ನಲ್‌ನಲ್ಲಿ ಸೋಮವಾರ ಸಂಜೆ 6.50ರ ಹೊತ್ತಿಗೆ ಹುಂಡೈ ಐ–20 ಕಾರು ಸ್ಫೋಟಗೊಂಡಿತ್ತು.
ಪುಲ್ವಾಮಾ ನಿವಾಸಿ, ವೈದ್ಯ ಉಮರ್ ಮೊಹಮ್ಮದ್ ಕಾರನ್ನು ಚಲಾಯಿಸುತ್ತಿದ್ದರು ಎಂದು ಮೂಲಗಳು ತಿಳಿಸಿವೆ.
ಕಾರು ಚಲಾಯಿಸಿದ್ದ ವ್ಯಕ್ತಿಯ ಸಿಸಿಟಿವಿ ದೃಶ್ಯಗಳು ಸೆರೆಯಾಗಿವೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
ಫರಿದಾಬಾದ್‌ನಲ್ಲಿ ಅಪಾರ ಪ್ರಮಾಣದ ಸ್ಫೋಟಕಗಳನ್ನು ವಶಪಡಿಸಲಾಗಿತ್ತು. ಆ ಭಯೋತ್ಪಾದಕ ಗುಂಪಿನೊಂದಿಗೂ ಆತನಿಗೆ ಸಂಪರ್ಕ ಇದೆ ಎನ್ನಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.