ADVERTISEMENT

Delhi Red Fort Blast: ದೆಹಲಿ ಸ್ಫೋಟದಲ್ಲಿ ಮೃತರ ಸಂಖ್ಯೆ 13ಕ್ಕೆ ಏರಿಕೆ

ಪಿಟಿಐ
Published 13 ನವೆಂಬರ್ 2025, 5:35 IST
Last Updated 13 ನವೆಂಬರ್ 2025, 5:35 IST
<div class="paragraphs"><p>ದೆಹಲಿ ಸ್ಫೋಟ</p></div>

ದೆಹಲಿ ಸ್ಫೋಟ

   

(ಪಿಟಿಐ ಚಿತ್ರ)

ನವದೆಹಲಿ: ದೆಹಲಿಯ ಕೆಂಪುಕೋಟೆ ಬಳಿ ಸಂಭವಿಸಿದ್ದ ಕಾರು ಸ್ಫೋಟದಲ್ಲಿ ಮೃತಪಟ್ಟವರ ಸಂಖ್ಯೆ 13ಕ್ಕೆ ಏರಿಕೆಯಾಗಿದೆ.

ADVERTISEMENT

ನವೆಂಬರ್ 10, ಸೋಮವಾರ ಸಂಜೆ ಕೆಂಪು ಕೋಟೆ ಮೆಟ್ರೊ ನಿಲ್ದಾಣದ ಸಮೀಪದ ಟ್ರಾಫಿಕ್ ಸಿಗ್ನಲ್‌ನಲ್ಲಿ ಕಾರು ಸ್ಫೋಟ ಸಂಭವಿಸಿತ್ತು. ಈ ಕಾರು ಸ್ಫೋಟದಲ್ಲಿ ಗಾಯಗೊಂಡು ಎಲ್‌ಎನ್‌ಜೆಪಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಬಿಲಾಲ್ ಎಂಬ ವ್ಯಕ್ತಿ ಮೃತಪಟ್ಟಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಸ್ಫೋಟದಲ್ಲಿ ಬಿಲಾಲ್ ಎಂಬ ವ್ಯಕ್ತಿ ತೀವ್ರವಾಗಿ ಗಾಯಗೊಂಡಿದ್ದರು. ಇಂದು ಬೆಳಿಗ್ಗೆ ಅವರ ಸಾವಿನ ಬಗ್ಗೆ ಆಸ್ಪತ್ರೆಯಿಂದ ಮಾಹಿತಿ ದೊರಕಿದೆ. ಮರಣೋತ್ತರ ಪರೀಕ್ಷೆಯನ್ನು ಇಂದು ಮಧ್ಯಾಹ್ನ ನಡೆಸಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.

ಈ ಸ್ಫೋಟದಲ್ಲಿ ಗಾಯಗೊಂಡವರಿಗೆ ಎಲ್‌ಎನ್‌ಜೆಪಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ದೆಹಲಿಯ ಕೆಂಪುಕೋಟೆ ಬಳಿ ಸೋಮವಾರ ನಡೆದ ಕಾರು ಸ್ಫೋಟವನ್ನು 'ಭಯೋತ್ಪಾದಕ ಕೃತ್ಯ' ಎಂದು ಕೇಂದ್ರ ಸರ್ಕಾರ ಹೇಳಿದೆ. ಅಲ್ಲದೆ ಎಲ್ಲ ಆಯಾಮಗಳಿಂದಲೂ ಸಮಗ್ರ ತನಿಖೆ ನಡೆಸಲಾಗುತ್ತಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.