
ದೆಹಲಿ ಸ್ಫೋಟ: ಪ್ರಮುಖ ಸಂಚುಕೋರ ಅಮೀರ್ ರಶೀದ್ ಅಲಿ
(ಪಿಟಿಐ ಚಿತ್ರ)
ನವದೆಹಲಿ: ದೆಹಲಿಯ ಕೆಂಪು ಕೋಟೆ ಬಳಿ ಸಂಭವಿಸಿದ ಕಾರು ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಸಂಚುಕೋರ ಅಮೀರ್ ರಶೀದ್ ಅಲಿನನ್ನು 10 ದಿನಗಳ ಕಾಲ ರಾಷ್ಟ್ರೀಯ ತನಿಖಾ ಸಂಸ್ಧೆ (ಎನ್‌ಐಎ) ವಶಕ್ಕೆ ಒಪ್ಪಿಸಿ ದೆಹಲಿ ನ್ಯಾಯಾಲಯ ಆದೇಶಿಸಿದೆ.
ಪಟಿಯಾಲ ಹೌಸ್ ಕೋರ್ಟ್ ಆವರಣದಲ್ಲಿ ಬಿಗಿ ಭದ್ರತೆಯ ನಡುವೆ ಪ್ರಮುಖ ಆರೋಪಿಯನ್ನು ಪ್ರಧಾನ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶರ ಮುಂದೆ ಹಾಜರುಪಡಿಸಲಾಯಿತು.
ನ್ಯಾಯಾಲಯದೊಳಗೆ ಮಾಧ್ಯಮ ಪ್ರತಿನಿಧಿಗಳಿಗೆ ಪ್ರವೇಶ ನಿರ್ಬಂಧಿಸಲಾಗಿತ್ತು. ನ್ಯಾಯಾಲಯದ ಆವರಣದಲ್ಲಿ ದೆಹಲಿ ಪೊಲೀಸ್ ಹಾಗೂ ಕ್ಷಿಪ್ರ ಕಾರ್ಯಪಡೆ (ಆರ್‌ಎಎಫ್) ಸಿಬ್ಬಂದಿಯನ್ನು ನಿಯೋಜಿಸಲಾಗಿತ್ತು.
ನವೆಂಬರ್ 10ರಂದು ಕೆಂಪು ಕೋಟೆಯ ಸಮೀಪ ಸಂಭವಿಸಿದ್ದ ಕಾರು ಸ್ಫೋಟದಲ್ಲಿ 13 ಮಂದಿ ಮೃತಪಟ್ಟು, ಹಲವರು ಗಾಯಗೊಂಡಿದ್ದರು.
ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಸಂಚುಕೋರ ಅಮೀರ್ ರಶೀದ್ ಅಲಿನನ್ನು ಎನ್‌ಐಎ ಅಧಿಕಾರಿಗಳು ಭಾನುವಾರ (ನ.16) ಬಂಧಿಸಿದ್ದರು.
ಕಾರನ್ನು ಜಮ್ಮು ಮತ್ತು ಕಾಶ್ಮೀರದ ಪುಲ್ವಾಮಾದ ವೈದ್ಯ ಉಮರ್ ನಬಿ ಚಲಾಯಿಸಿದ್ದರು. ಆದರೆ ಸ್ಫೋಟಗೊಂಡ ಹ್ಯುಂಡೈ ಐ20 ಕಾರು ಅಮೀರ್ ಹೆಸರಿನಲ್ಲಿ ನೋಂದಣಿಯಾಗಿತ್ತು. ಈತ ಜಮ್ಮು–ಕಾಶ್ಮೀರದ ಪಾಂಪೋರ್‌ನ ಸಂಬೂರಾ ನಿವಾಸಿ ಎಂದು ಎನ್‌ಐಎ ಅಧಿಕಾರಿಗಳು ತಿಳಿಸಿದ್ದಾರೆ.
ಅಮೀರ್ ರಶೀದ್ ಅಲಿ
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.