ADVERTISEMENT

Delhi Red Fort blast: ಮೃತರ ಸಂಖ್ಯೆ 12ಕ್ಕೆ ಏರಿಕೆ

ಪಿಟಿಐ
Published 11 ನವೆಂಬರ್ 2025, 6:15 IST
Last Updated 11 ನವೆಂಬರ್ 2025, 6:15 IST
   

ನವದೆಹಲಿ: ಕೆಂಪು ಕೋಟೆಯ ಬಳಿ ಸೋಮವಾರ ನಡೆದ ಸ್ಪೋಟದಲ್ಲಿ ಮೃತಪಟ್ಟವರ ಸಂಖ್ಯೆ 12ಕ್ಕೆ ಏರಿಕೆಯಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಸೋಮವಾರ ಸಂಜೆ ಕೆಂಪು ಕೋಟೆಯ ಬಳಿಯ ಮೆಟ್ರೊ ನಿಲ್ದಾಣದ ಸಮೀಪದ ಸಿಗ್ನಲ್‌ನಲ್ಲಿ ನಿಧಾನವಾಗಿ ಸಂಚರಿಸುತ್ತಿದ್ದ ಕಾರು ಸ್ಪೋಟಗೊಂಡಿತ್ತು. ಘಟನೆಯಲ್ಲಿ 20ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದರು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಘಟನೆಗೆ ಸಂಬಂಧಿಸಿದಂತೆ ಕಾನೂನುಬಾಹಿರ ಚಟುವಟಿಕೆಗಳ (ತಡೆಗಟ್ಟುವಿಕೆ) ಕಾಯ್ದೆ ಹಾಗೂ ಸ್ಫೋಟಕ ವಸ್ತುಗಳ ಕಾಯ್ದೆ ಅಡಿಯಲ್ಲಿ ಪೊಲೀಸರು ಮಂಗಳವಾರ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ADVERTISEMENT

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ವಿಮಾನ ನಿಲ್ದಾಣ, ರೈಲ್ವೇ ನಿಲ್ದಾಣ ಹಾಗೂ ಬಸ್‌ ನಿಲ್ದಾಣಗಳಲ್ಲಿ ತೀವ್ರ ತಪಾಸಣೆ ಮಾಡಲಾಗುತ್ತಿದೆ. ಮುನ್ನೆಚ್ಚರಿಕೆ ಕ್ರಮವಾಗಿ ಕೆಲವು ಪ್ರದೇಶಗಳಲ್ಲಿ ಸಂಚಾರ ನಿಯಂತ್ರಣ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ತಿಳಿಸಿದ್ದಾರೆ.

ಸ್ಪೋಟದ ನಂತರ ನಗರದ ಹಲವು ಕಡೆಗಳಲ್ಲಿ ಪೊಲೀಸರು ಶೋಧ ನಡೆಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.