ADVERTISEMENT

ದೆಹಲಿ: 17 ಸಾವಿರಕ್ಕೂ ಹೆಚ್ಚು ಹೊಸ ಪ್ರಕರಣ, 9 ಮಂದಿ ಸೋಂಕಿತರು ಸಾವು

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 7 ಜನವರಿ 2022, 15:35 IST
Last Updated 7 ಜನವರಿ 2022, 15:35 IST
ದೆಹಲಿಯಲ್ಲಿ ಸಾರ್ವಜನಿಕರಿಂದ ಗಂಟಲು ದ್ರವ ಮಾದರಿ ಸಂಗ್ರಹಿಸುತ್ತಿರುವ ಆರೋಗ್ಯ ಸಿಬ್ಬಂದಿ -ಪಿಟಿಐ ಚಿತ್ರ
ದೆಹಲಿಯಲ್ಲಿ ಸಾರ್ವಜನಿಕರಿಂದ ಗಂಟಲು ದ್ರವ ಮಾದರಿ ಸಂಗ್ರಹಿಸುತ್ತಿರುವ ಆರೋಗ್ಯ ಸಿಬ್ಬಂದಿ -ಪಿಟಿಐ ಚಿತ್ರ   

ನವದೆಹಲಿ: ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಶುಕ್ರವಾರ 17,335 ಹೊಸ ಕೋವಿಡ್‌ ಪ್ರಕರಣಗಳು ದೃಢಪಟ್ಟಿದ್ದು, 9 ಮಂದಿ ಸೋಂಕಿತರು ಮೃತಪಟ್ಟಿದ್ದಾರೆ ಎಂದು ಆರೋಗ್ಯ ಇಲಾಖೆ ತಿಳಿಸಿದೆ.

ಇದರೊಂದಿಗೆ ಸೋಂಕಿತರ ಸಂಖ್ಯೆ 15,06,798 ಕ್ಕೆ ಏರಿಕೆಯಾಗಿದೆ. ಆ ಪೈಕಿ 25,136 ಸೋಂಕಿತರು ಸಾವಿಗೀಡಾಗಿದ್ದಾರೆ.

ಈವರೆಗೆ 14,41,789 ಮಂದಿ ಗುಣಮುಖರಾಗಿದ್ದಾರೆ. ಸದ್ಯ ದೆಹಲಿಯಲ್ಲಿ 39,873 ಸಕ್ರಿಯ ಪ್ರಕರಣಗಳಿವೆ.

ADVERTISEMENT

ದೆಹಲಿಯಲ್ಲಿ ಪಾಸಿಟಿವಿಟಿ ದರ ಶೇ 17.73 ರಷ್ಟಿದ್ದು, ಮರಣ ಪ್ರಮಾಣ ಶೇ 1.67 ರಷ್ಟಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.