ADVERTISEMENT

ದೆಹಲಿಯಲ್ಲಿ ಮತ್ತೆ 4 ಪ್ರಕರಣ ದೃಢ, ಓಮೈಕ್ರಾನ್ ಸೋಂಕಿತರ ಸಂಖ್ಯೆ 6ಕ್ಕೆ ಏರಿಕೆ

ಪಿಟಿಐ
Published 14 ಡಿಸೆಂಬರ್ 2021, 9:39 IST
Last Updated 14 ಡಿಸೆಂಬರ್ 2021, 9:39 IST
ಸಾಂದರ್ಭಿಕ ಚಿತ್ರ – ಐಸ್ಟಾಕ್ ಕೃಪೆ
ಸಾಂದರ್ಭಿಕ ಚಿತ್ರ – ಐಸ್ಟಾಕ್ ಕೃಪೆ   

ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಕೊರೊನಾ ವೈರಸ್‌ನ ಹೊಸ ರೂಪಾಂತರ ಓಮೈಕ್ರಾನ್‌ನ ನಾಲ್ಕು ಪ್ರಕರಣಗಳು ಮಂಗಳವಾರ ದೃಢಪಟ್ಟಿವೆ. ಇದರೊಂದಿಗೆ ದೆಹಲಿಯಲ್ಲಿ ಓಮೈಕ್ರಾನ್ ಪ್ರಕರಣಗಳ ಸಂಖ್ಯೆ 6ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಸಚಿವ ಸತ್ಯೇಂದ್ರ ಜೈನ್ ತಿಳಿಸಿದ್ದಾರೆ.

ಸೋಂಕಿತರಿಗೆ ಲೋಕನಾಯಕ ಜಯಪ್ರಕಾಶ್ ನಾರಾಯಣ್ (ಎಲ್‌ಎನ್‌ಜೆಪಿ) ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ಆರು ಮಂದಿಯ ಪೈಕಿ ರಾಂಚಿಯ 37 ವರ್ಷದ ವ್ಯಕ್ತಿಯಲ್ಲಿ ಮೊದಲು ಓಮೈಕ್ರಾನ್ ಪತ್ತೆಯಾಗಿತ್ತು. ಅವರೀಗ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಉಳಿದ ಐವರಲ್ಲಿ ಸೋಂಕಿನ ಸೌಮ್ಯ ಲಕ್ಷಣಗಳಿವೆ ಎಂದು ಜೈನ್ ಮಾಹಿತಿ ನೀಡಿದ್ದಾರೆ.

ADVERTISEMENT

ಈವರೆಗೆ ವಿದೇಶಗಳಿಂದ ವಾಪಸಾದ 74 ಮಂದಿಯನ್ನು ಎಲ್‌ಎನ್‌ಜೆಪಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಈವರೆಗೆ 36 ಮಂದಿಯನ್ನು ಬಿಡುಗಡೆ ಮಾಡಲಾಗಿದೆ. ಉಳಿದ 38 ಮಂದಿಯ ಪೈಕಿ 35 ಮಂದಿಯಲ್ಲಿ ಕೋವಿಡ್ ದೃಢಪಟ್ಟಿತ್ತು. ಈ ಪೈಕಿ ಸದ್ಯ ಐವರು ಓಮೈಕ್ರಾನ್‌ ಸೋಂಕಿತರಾಗಿದ್ದು, ಮೂವರ ಮೇಲೆ ನಿಗಾ ಇರಿಸಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.