ADVERTISEMENT

ದೆಹಲಿ: ವ್ಯಕ್ತಿಯಲ್ಲಿ ಜಪಾನೀಸ್ ಎನ್ಸೆಫಾಲಿಟಿಸ್ ಸೋಂಕು ದೃಢ

ಪಿಟಿಐ
Published 28 ನವೆಂಬರ್ 2024, 7:54 IST
Last Updated 28 ನವೆಂಬರ್ 2024, 7:54 IST
<div class="paragraphs"><p>ಪ್ರಾತಿನಿಧಿಕ ಚಿತ್ರ</p></div>

ಪ್ರಾತಿನಿಧಿಕ ಚಿತ್ರ

   

ನವದೆಹಲಿ: ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ವ್ಯಕ್ತಿಯೊಬ್ಬರಿಗೆ ಜಪಾನೀಸ್ ಎನ್ಸೆಫಾಲಿಟಿಸ್(ಒಂದು ರೀತಿಯ ಮಿದುಳು ಜ್ವರ) ಸೋಂಕು ತಗಲಿರುವುದು ಧೃಡಪಟ್ಟಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ನವೆಂಬರ್ 3ರಂದು ಪಶ್ಚಿಮ ದೆಹಲಿಯ 72 ವರ್ಷದ ವ್ಯಕ್ತಿಯೊಬ್ಬರಿಗೆ ಎದೆನೋವು ಕಾಣಿಸಿಕೊಂಡಿದ್ದು, ಏಮ್ಸ್‌ನಲ್ಲಿ ಚಿಕಿತ್ಸೆ ನೀಡಲಾಗಿತ್ತು. ನವೆಂಬರ್ 6ರಂದು ವ್ಯಕ್ತಿಯ ರಕ್ತದ ಮಾದರಿಯನ್ನು ಪರೀಕ್ಷೆಗೆ ಒಳಪಡಿಸಿದಾಗ ಜಪಾನೀಸ್ ಎನ್ಸೆಫಾಲಿಟಿಸ್ ಸೋಂಕು ತಗುಲಿರುವುದು ಧೃಡಪಟ್ಟಿದೆ. ನವೆಂಬರ್ 15ರಂದು ಆಸ್ಪತ್ರೆಯಿಂದ ಬಿಡುಗಡೆ ಮಾಡಲಾಗಿದೆ ಎಂದು ಮೂಲಗಳು ತಿಳಿಸಿವೆ.

ADVERTISEMENT

ರೋಗದ ಬಗ್ಗೆ ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಂಡಿದ್ದು, ಆತಂಕಪಡುವ ಅಗ್ಯತವಿಲ್ಲ ಎಂದು ತಿಳಿಸಿದೆ.

ಏನಿದು ರೋಗ?

ಜಪಾನೀಸ್ ಎನ್ಸೆಫಾಲಿಟಿಸ್ ಸೋಂಕು ಅಪರೂಪದಲ್ಲೇ ಅಪರೂಪವಾಗಿದೆ. ಇದು ಕೊಕ್ಕರೆಯಂತಹ ಪಕ್ಷಿಗಳು ಹಾಗೂ ಹಂದಿ, ದನಗಳಲ್ಲಿ ಚಲನವಾಗುತ್ತಿರುತ್ತದೆ. ಆದರೆ, ಅವುಗಳಿಗೆ ರೋಗ ತಗುಲುವುದಿಲ್ಲ. ಸೋಂಕು ಇರುವ ಪಕ್ಷಿ, ಹಂದಿ ಅಥವಾ ದನಗಳಿಗೆ ಕಚ್ಚಿದ ಸೊಳ್ಳೆ ಮನುಷ್ಯರಿಗೆ ಕಚ್ಚಿದರೆ ಈ ಮಿದುಳು ಜ್ವರ ಹರಡುತ್ತದೆ. ಸೊಳ್ಳೆ ಕಚ್ಚಿದ ಸಾವಿರ ಜನರಲ್ಲಿ ಒಬ್ಬರಿಗೆ ಮಾತ್ರ ಮಿದುಳು ಜ್ವರ ಕಂಡುಬರುತ್ತದೆ ಎನ್ನುತ್ತಾರೆ ವೈದ್ಯರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.