ADVERTISEMENT

ದೆಹಲಿಯಲ್ಲಿ ಹಿಂಸಾಚಾರ ನಡೆಸಿದವರ ವಿರುದ್ಧ ಕ್ರಮಕ್ಕೆ ನಿವೃತ್ತ ಪೊಲೀಸರ ಆಗ್ರಹ

ಏಜೆನ್ಸೀಸ್
Published 27 ಜನವರಿ 2021, 9:13 IST
Last Updated 27 ಜನವರಿ 2021, 9:13 IST
ದೆಹಲಿಯ ಘಾಜಿಪುರ ಗಡಿಯಲ್ಲಿರುವ ರೈತರ ಪ್ರತಿಭಟನಾ ಸ್ಥಳದಲ್ಲಿ ಭದ್ರತಾ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ. –ಪಿಟಿಐ ಚಿತ್ರ
ದೆಹಲಿಯ ಘಾಜಿಪುರ ಗಡಿಯಲ್ಲಿರುವ ರೈತರ ಪ್ರತಿಭಟನಾ ಸ್ಥಳದಲ್ಲಿ ಭದ್ರತಾ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ. –ಪಿಟಿಐ ಚಿತ್ರ    

ನವದೆಹಲಿ: ‌ನಿನ್ನೆ ರೈತರ ಪ್ರತಿಭಟನೆಯ ರ್ಯಾಲಿ ಹಿಂಸಾಚಾರಕ್ಕೆ ತಿರುಗಿದ್ದಕ್ಕೆ ಸಾಕ್ಷಿಯಾಗಿದ್ದ ದೆಹಲಿಯ ಐಟಿಒ ಪ್ರದೇಶದಲ್ಲಿ ಇಂದು ಘಟನೆ ಖಂಡಿಸಿ ನಿವೃತ್ತ ಪೊಲೀಸ್ ಅಧಿಕಾರಿಗಳು ಪ್ರತಿಭಟನೆ ನಡೆಸುತ್ತಿದ್ದು, ಮತ್ತೆ ಸಂಚಾರ ವ್ಯತ್ಯಯವಾಗಿದೆ.

ನಿನ್ನೆ ಹಿಂಸಾಚಾರದಲ್ಲಿ ಭಾಗಿಯಾದವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವಂತೆ ಪ್ರತಿಭಟನಾಕಾರರು ಒತ್ತಾಯ ಮಾಡಿದ್ದಾರೆ.

ನಿವೃತ್ತ ಪೊಲೀಸ್ ಅಧಿಕಾರಿಗಳ ಪ್ರತಿಭಟನೆ ಹಿನ್ನೆಲೆಯಲ್ಲಿ ಮಿಂಟೋ ರಸ್ತೆಯಿಂದ ಕನಾಟ್ ಪ್ರದೇಶಕ್ಕೆ ತೆರಳುವ ಮಾರ್ಗ, ಐಟಿಒದಿಂದ ಇಂಡಿಯಾ ಗೇಟ್ ಗೆ ತೆರಳುವ ಮಾರ್ಗವನ್ನು ಬಂದ್ ಮಾಡಲಾಗಿದೆ.

ADVERTISEMENT

ಗಾಜಿಪುರ್ ಮಾರುಕಟ್ಟೆ, ರಾಷ್ಟ್ರೀಯ ಹೆದ್ದಾರಿ 9 ಮತ್ತು 24 ಅನ್ನು ಮುಚ್ಚಲಾಗಿದೆ.ದೆಹಲಿಯಿಂದ ಗಾಜಿಪುರ್ ಕಡೆಗೆ ತೆರಳುವವರು ಶಹ್ದಾರ ಮತ್ತು ಡಿಎನ್ ಡಿ ಮೂಲಕ ತೆರಳುವಂತೆ ಸೂಚಿಸಲಾಗಿದೆ.

ನಿನ್ನೆ ಟ್ರ್ಯಾಕ್ಟರ್ ರ್ಯಾಲಿ ಮೂಲಕ ದೆಹಲಿಗೆ ಪ್ರತಿಭಟನೆಗೆ ಆಗಮಿಸಿದ್ದ ರೈತರು ಪೊಲೀಸರ ಜೊತೆ ಸಂಘರ್ಷಕ್ಕೆ ಇಳಿದಿದ್ದರು. ಬ್ಯಾರಿಕೇಡ್ ಮುರಿದು ದೆಹಲಿಗೆ ನುಗ್ಗಿ ಪೊಲೀಸರ ಮೇಲೆ ಹಲ್ಲೆ ನಡೆಸಿದ್ದರು. ಘಟನೆಯಲ್ಲಿ 300ಕ್ಕೂ ಅಧಿಕ ಪೊಲೀಸರು ಗಾಯಗೊಂಡಿದ್ದರು.

ಇವುಗಳನ್ನೂ ಓದಿ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.