ADVERTISEMENT

ದೆಹಲಿ ಗಲಭೆ ಪ್ರಕರಣ: ಶಾರ್ಜಿಲ್, ಉಮರ್ ಖಾಲಿದ್‌ ಜಾಮೀನು ಅರ್ಜಿ ವಜಾ

​ಪ್ರಜಾವಾಣಿ ವಾರ್ತೆ
Published 2 ಸೆಪ್ಟೆಂಬರ್ 2025, 14:26 IST
Last Updated 2 ಸೆಪ್ಟೆಂಬರ್ 2025, 14:26 IST
ಪ್ರಾತಿನಿಧಿಕ (ಪಿಟಿಐ ಸಂಗ್ರಹ ಚಿತ್ರ)
ಪ್ರಾತಿನಿಧಿಕ (ಪಿಟಿಐ ಸಂಗ್ರಹ ಚಿತ್ರ)   

ನವದೆಹಲಿ (ಪಿಟಿಐ): 2020ರ ದೆಹಲಿ ಗಲಭೆ ಹಿಂದಿನ ಪಿತೂರಿ ಆರೋಪದಲ್ಲಿ ಯುಎಪಿಎ ಅಡಿ ವಿಚಾರಣೆ ಎದುರಿಸುತ್ತಿರುವ ಹೋರಾಟಗಾರ ಉಮರ್ ಖಾಲಿದ್, ಶಾರ್ಜಿಲ್ ಇಮಾಮ್ ಮತ್ತು ಇತರ ಏಳು ಮಂದಿಗೆ ದೆಹಲಿ ಹೈಕೋರ್ಟ್ ಮಂಗಳವಾರ ಜಾಮೀನು ನಿರಾಕರಿಸಿದೆ.

ಜುಲೈ 9ರಂದು ತನ್ನ ಆದೇಶವನ್ನು ಕಾಯ್ದಿರಿಸಿದ್ದ ನ್ಯಾಯಮೂರ್ತಿಗಳಾದ ನವೀನ್ ಚಾವ್ಲಾ ಮತ್ತು ಶಾಲಿಂದರ್ ಕೌರ್‌ ಅವರ ಪೀಠವು, ಎಲ್ಲಾ ಮೇಲ್ಮನವಿಗಳನ್ನು ವಜಾಗೊಳಿಸಲಾಗಿದೆ ಎಂದು ಮಂಗಳವಾರ ತೀರ್ಪು ನೀಡಿದೆ. ವಿವರವಾದ ಆದೇಶ ಇನ್ನಷ್ಟೆ ಬರಬೇಕಿದೆ.

ಆರೋಪಿಗಳಾದ ಉಮರ್ ಖಾಲಿದ್, ಶಾರ್ಜಿಲ್ ಇಮಾಂ, ಮೊಹಮ್ಮದ್ ಸಲೀಮ್ ಖಾನ್, ಶಿಫಾ ಉರ್‌ ರೆಹಮಾನ್, ಅಥರ್ ಖಾನ್, ಮೀರಾನ್ ಹೈದರ್, ಅಬ್ದುಲ್ ಖಾಲಿದ್ ಸೈಫಿ, ಗುಲ್ಫಿಶಾ ಫಾತಿಮಾ ಮತ್ತು ಶಾದಾಬ್ ಅಹ್ಮದ್ ಅವರು 2020ರಿಂದ ಜೈಲಿನಲ್ಲಿದ್ದಾರೆ.

ADVERTISEMENT

ತಮ್ಮ ಜಾಮೀನು ಅರ್ಜಿಗಳನ್ನು ವಜಾಗೊಳಿಸಿದ ವಿಚಾರಣಾ ನ್ಯಾಯಾಲಯದ ಆದೇಶದ ವಿರುದ್ಧ ಅವರು ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು‌.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.