
ಪ್ರಜಾವಾಣಿ ವಾರ್ತೆ
ನವದೆಹಲಿ: ದೆಹಲಿ ಗಲಭೆಯ ಪಿತೂರಿ ಪ್ರಕರಣದ ಮೂವರು ಆರೋಪಿಗಳಾದ ಸಲೀಂ ಮಲಿಕ್, ಅಥರ್ ಖಾನ್ ಮತ್ತು ಆಮ್ ಆದ್ಮಿ ಪಕ್ಷದ ಮಾಜಿ ಕೌನ್ಸಿಲರ್ ತಾಹಿರ್ ಹುಸೇನ್ ಅವರ ಜಾಮೀನು ಅರ್ಜಿಗಳನ್ನು ದೆಹಲಿ ನ್ಯಾಯಾಲಯ ಗುರುವಾರ ತಿರಸ್ಕರಿಸಿದೆ.
ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ ಸಮೀರ್ ಬಾಜಪೇಯಿ ಅವರು ಆರೋಪಿಗಳ ಜಾಮೀನು ಅರ್ಜಿಗಳ ವಿಚಾರಣೆ ನಡೆಸಿ, ಜಾಮೀನು ನಿರಾಕರಿಸಿದರು.
2020ರ ಗಲಭೆಯಲ್ಲಿ ಭಾಗಿಯಾಗಿದ್ದಾರೆ ಎಂಬ ಆರೋಪದಡಿ ಈ ಮೂವರ ಮೇಲೆ ಕಾನೂನು ಬಾಹಿರ ಚಟುವಟಿಕೆಗಳ ತಡೆ ಕಾಯ್ದೆಯಡಿ ಆರೋಪ ಹೊರಿಸಲಾಗಿದೆ.
ಇದೇ ಪ್ರಕರಣದಲ್ಲಿ ಇತರ ಐದು ಆರೋಪಿಗಳಿಗೆ ಸುಪ್ರೀಂ ಕೋರ್ಟ್ ಜಾಮೀನು ನೀಡಿದ ಬಳಿಕ, ಈ ಮೂವರು ಜಾಮೀನು ಅರ್ಜಿಗಳನ್ನು ಸಲ್ಲಿಸಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.