
ಉಮರ್ ಖಾಲಿದ್ ಹಾಗೂ ಶಾರ್ಜಿಲ್ ಇಮಾಮ್
– ಪಿಟಿಐ ಚಿತ್ರಗಳು
ನವದೆಹಲಿ: 2020ರ ದೆಹಲಿ ಗಲಭೆ ಸಂಬಂಧ ಸಂಚು ರೂಪಿಸಿದ ಆರೋಪದಲ್ಲಿ ಕಾನೂನು ಬಾಹಿರ ಚುಟುವಟಿಕೆಗಳ ನಿಯಂತ್ರಣ ಕಾಯ್ದೆಯಡಿ (ಯುಎಪಿಎ) ಬಂಧನದಲ್ಲಿರುವ ಉಮರ್ ಖಾಲಿದ್ ಹಾಗೂ ಶಾರ್ಜಿಲ್ ಇಮಾಮ್‌ಗೆ ಜಾಮೀನು ನೀಡಲು ಸುಪ್ರೀಂ ಕೋರ್ಟ್ ಸೋಮವಾರ ನಿರಾಕರಿಸಿದೆ.
ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿಗಳಾದ ಅರವಿಂದ ಕುಮಾರ್ ಹಾಗೂ ಎನ್.ವಿ ಅಂಜಾರಿಯ ಅವರಿದ್ದ ಪೀಠ ಇತರೆ ಐವರು ಆರೋಪಿಗಳಾದ ಗುಲ್‌ಫಿಶಾ ಫಾತಿಮಾ, ಮೀರನ್ ಹೈದರ್, ಶಿಫಾ ಉರ್ ರೆಹಮಾನ್ ಹಾಗೂ ಮೊಹಮ್ಮದ್ ಸಲೀಂ ಖಾನ್‌ಗೆ ಜಾಮೀನು ನೀಡಿದೆ.
ಪ್ರಕರಣದಲ್ಲಿ ಏಳು ಆರೋಪಿಗಳ ಪಾತ್ರ ಬೇರೆ ಬೇರೆ ಇರುವುದರಿಂದ ಪ್ರತಿಯೊಬ್ಬರ ಜಾಮೀನು ಅರ್ಜಿಯನ್ನು ಪ್ರತ್ಯೇಕವಾಗಿ ಪರಿಶೀಲನೆ ನಡೆಸಲಾಗುವುದು ಎಂದು ಕೋರ್ಟ್ ಹೇಳಿದೆ.
ಇತರ ಆರೋಪಿಗಳಿಗೆ ಹೋಲಿಸಿದರೆ ಉಮರ್ ಖಾಲಿದ್ ಮತ್ತು ಶಾರ್ಜಿಲ್ ಇಮಾಮ್ ಅವರ ಪಾತ್ರ ಭಿನ್ನವಾಗಿದೆ ಎಂದು ನ್ಯಾಯಪೀಠ ಹೇಳಿದೆ.
ಲಭ್ಯ ಇರುವ ಸಾಕ್ಷಿಗಳು ಮೇಲ್ನೋಟಕ್ಕೆ ಖಾಲಿದ್ ಹಾಗೂ ಇಮಾಮ್ ಮೇಲಿರುವ ಆರೋಪಗಳನ್ನು ತೋರಿಸುತ್ತವೆ ಎಂದು ಕೋರ್ಟ್ ಅಭಿಪ್ರಾಯಪಟ್ಟಿದೆ.
(ಬಾರ್ ಆ್ಯಂಡ್ ಬೆಂಚ್ ವರದಿ ಆಧರಿಸಿದ ಸುದ್ದಿ)
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.