ADVERTISEMENT

ಉಮರ್‌ ಖಾಲಿದ್‌ ಜಾಮೀನು ಅರ್ಜಿ ವಜಾ ಮಾಡಿದ ದೆಹಲಿ ಹೈಕೋರ್ಟ್‌

ಪಿಟಿಐ
Published 18 ಅಕ್ಟೋಬರ್ 2022, 15:38 IST
Last Updated 18 ಅಕ್ಟೋಬರ್ 2022, 15:38 IST

ನವದೆಹಲಿ: ‘ಕಾನೂನುಬಾಹಿರ ಚಟುವಟಿಕೆ ತಡೆ ಕಾಯ್ದೆ (ಯುಎಪಿಎ) ಅಡಿಯಲ್ಲಿ ಕಳೆದ ಎರಡು ವರ್ಷದಿಂದ ಜೈಲಿನಲ್ಲಿರುವ ಜೆಎನ್‌ಯುನ ಮಾಜಿ ವಿದ್ಯಾರ್ಥಿ ಉಮರ್‌ ಖಾಲಿದ್‌ ಅವರಿಗೆ ಜಾಮೀನು ದೆಹಲಿ ಹೈಕೋರ್ಟ್‌ ಮಂಗಳವಾರ ನಿರಾಕರಿಸಿದೆ.

‘ಜಾಮೀನು ಅರ್ಜಿಯಲ್ಲಿ ಹುರುಳಿಲ್ಲ. ಆದ್ದರಿಂದ ಜಾಮೀನು ಅರ್ಜಿಯನ್ನು ವಜಾ ಮಾಡಲಾಗಿದೆ’ ಎಂದು ನ್ಯಾಯಮೂರ್ತಿಗಳಾದ ಸಿದ್ಧಾರ್ಥ್‌ ಮೃದುಲ್‌ ಮತ್ತು ರಜನೀಶ್‌ ಭಾಟ್ನಗರ್‌ ಹೇಳಿದರು.

ಮಾರ್ಚ್‌ 24ರಂದು ವಿಚಾರಣಾ ನ್ಯಾಯಾಲಯವು ಖಾಲಿದ್‌ ಅವರ ಜಾಮೀನು ಅರ್ಜಿಯನ್ನು ವಜಾ ಮಾಡಿತ್ತು. ಈ ಕುರಿತು ದೆಹಲಿ ಹೈಕೋರ್ಟ್‌ಗೆ ಖಾಲಿದ್‌ ಮೇಲ್ಮನವಿ ಸಲ್ಲಿಸಿದ್ದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.