ADVERTISEMENT

ದೆಹಲಿ ಗಲಭೆ: 10 ಸಾವಿರ ಪುಟದ ದೋಷಾರೋಪ ಪಟ್ಟಿ ಸಲ್ಲಿಕೆ

ಪಿಟಿಐ
Published 16 ಸೆಪ್ಟೆಂಬರ್ 2020, 12:32 IST
Last Updated 16 ಸೆಪ್ಟೆಂಬರ್ 2020, 12:32 IST
ದೆಹಲಿಯಲ್ಲಿ ನಡೆದ ಗಲಭೆ ಸಂದರ್ಭ
ದೆಹಲಿಯಲ್ಲಿ ನಡೆದ ಗಲಭೆ ಸಂದರ್ಭ   

ನವದೆಹಲಿ: ದೆಹಲಿಯಲ್ಲಿ ಈ ವರ್ಷದ ಫೆಬ್ರುವರಿಯಲ್ಲಿ ನಡೆದಿದ್ದ ಗಲಭೆಗೆ ಸಂಬಂಧಿಸಿದಂತೆ ಪೊಲೀಸರು ಸ್ಥಳೀಯ ನ್ಯಾಯಾಲಯದಲ್ಲಿ ಸುಮಾರು10 ಸಾವಿರ ಪುಟಗಳ ದೋಷಾರೋಪ ಪಟ್ಟಿಯನ್ನು ಸಲ್ಲಿಸಿದ್ದಾರೆ.

15 ಜನರ ವಿರುದ್ಧ ಗಲಭೆಗೆ ಸಂಚು ನಡೆಸಿದ್ದಕ್ಕೆ ಸಂಬಂಧಿಸಿದಂತೆ ಕಾನೂನುಬಾಹಿರ ಚಟುವಟಿಕೆ ನಿಯಂತ್ರಣ ಕಾಯ್ದೆ (ಯುಎಪಿಎ)ಯ ವಿವಿಧ ಸೆಕ್ಷನ್‌ಗಳ ಅನ್ವಯ ಪ್ರಕರಣ ದಾಖಲಿಸಲಾಗಿದೆ. ಮೊಬೈಲ್ ಕರೆ ದಾಖಲೆ, ವಾಟ್ಸ್ ಆ್ಯಪ್ ಸಂವಹನವನ್ನು ಆಧರಿಸಲಾಗಿದೆ ಎಂದು ದೆಹಲಿ ಪೊಲೀಸರು ತಿಳಿಸಿದ್ದಾರೆ.

ಒಟ್ಟು 747 ಜನರ ಸಾಕ್ಷ್ಯಗಳ ಪಟ್ಟಿಯನ್ನು ಪೊಲೀಸರು ಮಾಡಿದ್ದು, ಈ ಪೈಕಿ 51 ಜನರು ತಮ್ಮ ಹೇಳಿಕೆಯನ್ನು ದಾಖಲಿಸಿದ್ದಾರೆ. ಸಿಎಎ ಬೆಂಬಲಿಗರು ಮತ್ತು ವಿರೋಧ ಮಾಡುತ್ತಿದ್ದವರ ನಡುವೆ ಫೆಬ್ರುವರಿ ತಿಂಗಳಲ್ಲಿ ನಡೆದಿದ್ದ ಗಲಭೆಯಲ್ಲಿ ಸುಮಾರು 53 ಜನರು ಸತ್ತಿದ್ದು, 200 ಮಂದಿ ಗಾಯಗೊಂಡಿದ್ದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.