ನವದೆಹಲಿ: ಹೋರಾಟಗಾರರಾದ ಉಮರ್ ಖಾಲಿದ್, ಶರ್ಜೀಲ್ ಇಮಾಮ್ ಮತ್ತು ಗುಲ್ಫಿಶಾ ಫಾತಿಮಾ ಅವರ ಜಾಮೀನು ಅರ್ಜಿ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ಸೆಪ್ಟೆಂಬರ್ 12ಕ್ಕೆ ಕೈಗೆತ್ತಿಕೊಳ್ಳಲಿದೆ. 2020ರ ದೆಹಲಿ ಗಲಭೆ ಪಿತೂರಿ ಆರೋಪದಲ್ಲಿ ಯುಎಪಿಎ ಅಡಿಯಲ್ಲಿ ಬಂಧಿತರಾಗಿರುವ ಅವರಿಗೆ ಸೆಪ್ಟೆಂಬರ್ 2ರಂದು ದೆಹಲಿ ಹೈಕೋರ್ಟ್ ಜಾಮೀನು ನಿರಾಕರಿಸಿತ್ತು.
ನ್ಯಾಯಮೂರ್ತಿ ಅರವಿಂದ್ ಕುಮಾರ್ ಮತ್ತು ಎನ್.ವಿ. ಅಂಜಾರಿಯಾ ಅವರ ಪೀಠವು ಹೋರಾಟಗಾರರ ಅರ್ಜಿ ವಿಚಾರಣೆ ನಡೆಸುವ ಸಾಧ್ಯತೆಯಿದೆ.
ಉಮರ್ ಖಾಲಿದ್ ಮತ್ತು ಶರ್ಜೀಲ್ ಇಮಾಮ್ ಸೇರಿದಂತೆ ಒಂಬತ್ತು ಮಂದಿಗೆ ಹೈಕೋರ್ಟ್ ಜಾಮೀನು ನಿರಾಕರಿಸಿತ್ತು. ನಾಗರಿಕರ ಪ್ರತಿಭಟನೆಯ ಹೆಸರಿನಲ್ಲಿ ಪಿತೂರಿಯ ಹಿಂಸಾಚಾರಕ್ಕೆ ಅನುಮತಿ ನೀಡುವುದಿಲ್ಲ ಎಂದು ಈ ವೇಳೆ ಹೈಕೋರ್ಟ್ ಹೇಳಿತ್ತು.
ತಮ್ಮ ಮೇಲಿನ ಎಲ್ಲಾ ಆರೋಪಗಳನ್ನು ನಿರಾಕರಿಸಿರುವ ಹೋರಾಟಗಾರರು 2020ರಿಂದ ಜೈಲಿನಲ್ಲಿದ್ದಾರೆ. ವಿಚಾರಣಾ ಕೋರ್ಟ್ ಅವರ ಜಾಮೀನು ನಿರಾಕರಿಸಿದ ನಂತರ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.