ADVERTISEMENT

ದೆಹಲಿ ‌| ಬೆಂಕಿ ಅವಘಡ: ಒಂದೇ ಕುಟುಂಬದ ಆರು ಮಂದಿಗೆ ಗಾಯ

ಪಿಟಿಐ
Published 8 ಡಿಸೆಂಬರ್ 2024, 9:08 IST
Last Updated 8 ಡಿಸೆಂಬರ್ 2024, 9:08 IST
<div class="paragraphs"><p>ಪ್ರಾತಿನಿಧಿಕ ಚಿತ್ರ</p></div>

ಪ್ರಾತಿನಿಧಿಕ ಚಿತ್ರ

   

ನವದೆಹಲಿ: ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಎರಡು ಅಂತಸ್ತಿನ ಮನೆಯ ಮೇಲ್ಛಾವಣಿ ಕುಸಿದು ಬೆಂಕಿ ಹೊತ್ತಿಕೊಂಡ ಪರಿಣಾಮ ಒಂದೇ ಕುಟುಂಬದ ಆರು ಮಂದಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

‘ನರೇಲಾದ ಶಾನಿ ಬಜಾರ್‌ ಪ್ರದೇಶದಲ್ಲಿ ಇಂದು (ಭಾನುವಾರ) ಬೆಳಿಗ್ಗೆ 7.53ಕ್ಕೆ ಕಟ್ಟಡ ಕುಸಿತ ಮತ್ತು ಬೆಂಕಿ ಹೊತ್ತಿಕೊಂಡಿರುವ ಬಗ್ಗೆ ಕರೆ ಬಂದಿತ್ತು. ತಕ್ಷಣ ಅಗ್ನಿಶಾಮಕ ತಂಡ ಸ್ಥಳಕ್ಕೆ ಧಾವಿಸಿತು’ ಎಂದು ದೆಹಲಿ ಅಗ್ನಿಶಾಮಕ ಸೇವೆಗಳ ಮುಖ್ಯಸ್ಥ ಅತುಲ್‌ ಗಾರ್ಗ್‌ ಹೇಳಿದ್ದಾರೆ.

ADVERTISEMENT

ಡಿಡಿಎ ಜಂತಾ ಫ್ಲಾಟ್‌ನ ಮೇಲ್ಛಾವಣಿ ಕುಸಿದು ಬಿದ್ದ ಪರಿಣಾಮ ಪಿಎನ್‌ಜಿ ಗ್ಯಾಸ್‌ ಪೈಪ್‌ ಲೈನ್‌ ಒಡೆದು ಬೆಂಕಿ ಹೊತ್ತಿಕೊಂಡಿದ್ದು, ಮನೆಯಾದ್ಯಂತ ವ್ಯಾಪಿಸಿದೆ ಎಂದು ಅವರು ತಿಳಿಸಿದ್ದಾರೆ.

ಛಾವಣಿ ಕುಸಿತದ ವೇಳೆ ರಾಜು, ಅವರ ಪತ್ನಿ ರಾಜೇಶ್ವರಿ, ಮಗ ರಾಹುಲ್, ಮತ್ತು ಅವರ ಮೂವರು ಪುತ್ರಿಯರಾದ ಮೋಹಿನಿ, ವರ್ಷ ಮತ್ತು ಮಹಿ ಎಂಬುವರು ಮನೆಯಲ್ಲಿದ್ದರು. ಅವಶೇಷಗಳಡಿಯಲ್ಲಿ ಸಿಲುಕಿಕೊಂಡಿದ್ದರು ಎಂದು ಪೊಲೀಸ್ ಅಧಿಕಾರಿಯೊಬ್ಬರು ಹೇಳಿದ್ದಾರೆ.

ಬೆಂಕಿ ತಗುಲಿದ ಪರಿಣಾಮ ಕುಟುಂಬ ಸದಸ್ಯರಿಗೆ ಸುಟ್ಟ ಗಾಯಗಳಾಗಿವೆ. ಗಾಯಾಳುಗಳನ್ನು ರಾಜಾ ಹರಿಶ್ಚಂದ್ರ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ. ಈ ಬಗ್ಗೆ ಹೆಚ್ಚಿನ ತನಿಖೆ ನಡೆಯುತ್ತಿದೆ ಎಂದು ಅಧಿಕಾರಿ ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.