ಬಾಂಬ್ ಬೆದರಿಕೆ
(ಸಾಂದರ್ಭಿಕ ಚಿತ್ರ)
ನವದೆಹಲಿ: ರಾಷ್ಟ್ರ ರಾಜಧಾನಿ ದೆಹಲಿಯ ಹಲವು ಶಾಲೆಗಳಿಗೆ ಶನಿವಾರ ಬಾಂಬ್ ಬೆದರಿಕೆಗಳು ಬಂದಿದೆ. ಇದು ಜನರಲ್ಲಿ ಭಯವನ್ನು ಮೂಡಿಸಿದ್ದು, ಪೊಲೀಸರು ಹಾಗೂ ಬಾಂಬ್ ನಿಷ್ಕ್ರಿಯ ದಳ ತ್ವರಿತವಾಗಿ ಸ್ಪಂದಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ದ್ವಾರಕಾದಲ್ಲಿರುವ ದೆಹಲಿ ಪಬ್ಲಿಕ್ ಸ್ಕೂಲ್, ಕೃಷ್ಣ ಮೊಡಲ್ ಸ್ಕೂಲ್ ಹಾಗೂ ಸರ್ವೋದಯ ವಿದ್ಯಾಲಯ ಸೇರಿ ಹಲವು ಶಾಲೆಗಳಿಗೆ ಬಾಂಬ್ ಬೆದರಿಕೆ ಬಂದಿವೆ.
ಬಾಂಬ್ ನಿಷ್ಕ್ರೀಯ ದಳ ಹಾಗೂ ಪೊಲೀಸ್ ತಂಡಗಳು ಶಾಲೆಗಳಿಗೆ ಧಾವಿಸಿದ್ದು, ವಿದ್ಯಾರ್ಥಿಗಳು ಹಾಗೂ ಸಿಬ್ಬಂದಿಯನ್ನು ಮುನ್ನೆಚ್ಚರಿಕಾ ಕ್ರಮವಾಗಿ ಸ್ಥಳಾಂತರಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ನಾವು ಶಾಲೆಗಳ ಆವರಣಗಳನ್ನು ಸಂಪೂರ್ಣವಾಗಿ ಪರಿಶೀಲನೆ ನಡೆಸುತ್ತಿದ್ದೇವೆ. ಈವರೆಗೂ ಅನುಮಾನಾಸ್ಪದವಾಗಿದ್ದು ಏನೂ ಕಂಡು ಬಂದಿಲ್ಲ. ಶಾಲೆಗಳಲ್ಲಿ ಶೋಧ ಕಾರ್ಯಾಚರಣೆ ಮುಂದುವರಿದಿದೆ ಎಂದು ಪೊಲೀಸ್ ಇಲಾಖೆಯ ಹಿರಿಯ ಅಧಿಕಾರಿ ತಿಳಿಸಿದ್ದಾರೆ.
ಈ ಬಾಂಬ್ ಬೆದರಿಕೆ ಭಯ ಪಡಿಸುವ ಯತ್ನ ಎಂದು ಶಂಕಿಸಿರುವ ಪೊಲೀಸರು, ಎಲ್ಲಿಂದ ಬೆದರಿಕೆ ಬಂದಿದೆ ಎನ್ನುವುದರ ಬಗ್ಗೆ ತನಿಖೆ ನಡೆಸುತ್ತಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.