ADVERTISEMENT

ದೆಹಲಿ: 20ಕ್ಕೂ ಹೆಚ್ಚು ಶಾಲೆಗಳಿಗೆ ಬಾಂಬ್‌ ಬೆದರಿಕೆ

ಪಿಟಿಐ
Published 18 ಜುಲೈ 2025, 5:14 IST
Last Updated 18 ಜುಲೈ 2025, 5:14 IST
<div class="paragraphs"><p>ಬಾಂಬ್ ಬೆದರಿಕೆ ಬಂದ ಶಾಲೆಗಳ ಬಳಿ ಧಾವಿಸಿರುವ ಪೊಲೀಸ್ ಸಿಬ್ಬಂದಿ</p></div>

ಬಾಂಬ್ ಬೆದರಿಕೆ ಬಂದ ಶಾಲೆಗಳ ಬಳಿ ಧಾವಿಸಿರುವ ಪೊಲೀಸ್ ಸಿಬ್ಬಂದಿ

   

ಪಿಟಿಐ ಚಿತ್ರ

ನವದೆಹಲಿ: ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ 20ಕ್ಕೂ ಹೆಚ್ಚು ಶಾಲೆಗಳಿಗೆ ಬಾಂಬ್‌ ಬೆದರಿಕೆ ಸಂದೇಶ ಬಂದಿದ್ದು, ವಿದ್ಯಾರ್ಥಿಗಳು ಮತ್ತು ಪೋಷಕರಲ್ಲಿ ಆತಂಕ ಹೆಚ್ಚಾಗಿದೆ.

ADVERTISEMENT

ವಾರದಲ್ಲಿ ನಾಲ್ಕನೇ ಬಾರಿ ಶಾಲೆಗಳಿಗೆ ಬೆದರಿಕೆ ಸಂದೇಶ ಬಂದಿದ್ದು, ಪೊಲೀಸರು ತನಿಖೆ ಆರಂಭಿಸಿದ್ದಾರೆ.

‘ಬೆದರಿಕೆ ಸಂದೇಶ ಬಂದ ಶಾಲೆಗಳಲ್ಲಿ ಮಕ್ಕಳನ್ನು ಹೊರಕ್ಕೆ ಕಳುಹಿಸಲಾಗಿದೆ. ಸ್ಥಳಕ್ಕೆ ಬಾಂಬ್‌ ನಿಗ್ರಹ ತಂಡ, ಶ್ವಾನ ದಳ, ಅಗ್ನಿಶಾಮಕ ಸಿಬ್ಬಂದಿ ಧಾವಿಸಿದ್ದಾರೆ’ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

20ಕ್ಕೂ ಹೆಚ್ಚು ಶಾಲೆಗಳಿಗೆ ಬಾಂಬ್‌ ಬೆದರಿಕೆ ಬಂದಿದೆ ಎಂದಿರುವ ಮಾಜಿ ಮುಖ್ಯಮಂತ್ರಿ ಆತಿಶಿ, ‘ಮಕ್ಕಳು, ಪೋಷಕರು ಮತ್ತು ಶಿಕ್ಷಕರು ಅನುಭವಿಸುವ ಆಘಾತವನ್ನು ಊಹಿಸಿ. ದೆಹಲಿಯ ಆಡಳಿತದ ಎಲ್ಲಾ 4-ಎಂಜಿನ್‌ಗಳನ್ನು ಬಿಜೆಪಿ ನಿಯಂತ್ರಿಸುತ್ತಿದೆ. ಆದರೆ ನಮ್ಮ ಮಕ್ಕಳಿಗೆ ಯಾವುದೇ ಸುರಕ್ಷತೆ ಅಥವಾ ಭದ್ರತೆಯನ್ನು ಒದಗಿಸಲು ಇನ್ನೂ ಸಾಧ್ಯವಾಗಿಲ್ಲ, ಇದು ಆಘಾತಕಾರಿ’ ಎಂದು ಬಿಜೆಪಿ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.