ADVERTISEMENT

ದೆಹಲಿ: ಕೆಂಪುಕೋಟೆ ಸುತ್ತಮುತ್ತ ಭಾರಿ ಭದ್ರತೆ

ಏಜೆನ್ಸೀಸ್
Published 27 ಜನವರಿ 2021, 4:46 IST
Last Updated 27 ಜನವರಿ 2021, 4:46 IST
ಕೆಂಪುಕೋಟೆ ಸುತ್ತಮುತ್ತ ಭಾರಿ ಭದ್ರತೆಯನ್ನು ಕಲ್ಪಸಲಾಗಿದೆ. (ಎಎನ್‌ಐ ಟ್ವಿಟರ್ ಚಿತ್ರ)
ಕೆಂಪುಕೋಟೆ ಸುತ್ತಮುತ್ತ ಭಾರಿ ಭದ್ರತೆಯನ್ನು ಕಲ್ಪಸಲಾಗಿದೆ. (ಎಎನ್‌ಐ ಟ್ವಿಟರ್ ಚಿತ್ರ)   

ನವದೆಹಲಿ: ರೈತರ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿರುವ ಹಿನ್ನೆಲೆಯಲ್ಲಿ ದೆಹಲಿಯ ಕೆಂಪುಕೋಟೆ ಸುತ್ತಮುತ್ತ ಭಾರಿ ಭದ್ರತೆಯನ್ನು ಕಲ್ಪಿಸಲಾಗಿದೆ.

ಮಂಗಳವಾರ ವಿವಿಧ ಭಾಗಗಳಿಂದ ದೆಹಲಿಗೆ ಲಗ್ಗೆ ಇಟ್ಟಿದ್ದ ರೈತರು ಪೊಲೀಸರ ಜತೆಗೆ ಸಂಘರ್ಷಕ್ಕೆ ಇಳಿದರು. ಗಣರಾಜ್ಯೋತ್ಸವ ದಿನದಂದು ಐತಿಹಾಸಿಕ ಕೆಂಪುಕೋಟೆಗೆ ಮುತ್ತಿಗೆ ಹಾಕಿ, ಅಲ್ಲಿ ಧ್ವಜಾರೋಹಣವನ್ನೂ ಮಾಡಿದರು.

ರೈತರ ಟ್ರ್ಯಾಕ್ಟರ್‌ ರ್‍ಯಾಲಿ ಹಿಂಸಾತ್ಮಕ ರೂಪಕ್ಕೆ ತಿರುಗಿತ್ತು. ಘಟನೆಯಲ್ಲಿ ಒಬ್ಬ ರೈತ ಮೃತಪಟ್ಟಿದ್ದು, ಹಲವು ಪೊಲೀಸ್ ಸಿಬ್ಬಂದಿ ಗಾಯಗೊಂಡಿದ್ದಾರೆ.

ADVERTISEMENT

ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಕೃಷಿ ಕಾನೂನುಗಳನ್ನು ಹಿಂಪಡೆಯುವಂತೆ ಆಗ್ರಹಿಸಿ ಪಂಜಾಬ್‌, ಹರಿಯಾಣ, ಉತ್ತರ ಪ್ರದೇಶ ಸೇರಿದಂತೆ ವಿವಿಧ ರಾಜ್ಯಗಳ ರೈತರು ದೆಹಲಿಯ ಗಡಿಪ್ರದೇಶಗಳಲ್ಲಿ ಸತತ 60 ದಿನಗಳಿಂದ ಪ್ರತಿಭಟನೆ ನಡೆಸುತ್ತಿದ್ದಾರೆ.

ರೈತರ ಪ್ರತಿಭಟನೆ ಕೂಗು ಮತ್ತಷ್ಟು ಹೆಚ್ಚಾಗುವ ಸಾಧ್ಯತೆಗಳಿದ್ದು, ಮುನ್ನೆಚ್ಚರಿಕಾ ಕ್ರಮವಾಗಿ ಪೊಲೀಸ್‌ ಭದ್ರತೆಯನ್ನು ಹೆಚ್ಚಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಇವುಗಳನ್ನೂ ಓದಿ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.