ಪ್ರಾತಿನಿಧಿಕ ಚಿತ್ರ
ನವದೆಹಲಿ: ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ದಟ್ಟ ಮಂಜು ಆವರಿಸಿಕೊಂಡಿದ್ದು, ರೈಲು, ವಿಮಾನ ಸಂಚಾರದಲ್ಲಿ ವ್ಯತ್ಯಯ ಆಗಿದೆ.
ಹವಾಮಾನ ವೈಪರೀತ್ಯ, ಕಡಿಮೆ ಗೋಚರತೆ ಕಾರಣದಿಂದಾಗಿ ದೆಹಲಿಯ ಇಂದಿರಾಗಾಂಧಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ವಿಮಾನಗಳ ಸಂಚಾರದಲ್ಲಿ ವ್ಯತ್ಯಯವಾಗಿದೆ. ರೈಲು ಸಂಚಾರದಲ್ಲಿಯೂ ಸಮಯ ಬದಲಾವಣೆಯಾಗಿದ್ದು, ಕೆಲವು ರೈಲುಗಳನ್ನು ರದ್ದುಪಡಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ದೆಹಲಿಯಲ್ಲಿ ಇಂದು ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಯೆಲ್ಲೊ ಅಲರ್ಟ್ ಘೋಷಿಸಿದೆ.
ದೆಹಲಿಯಲ್ಲಿ ಕನಿಷ್ಠ ತಾಪಮಾನ 9.6 ಡಿಗ್ರಿ ಸೆಲ್ಸಿಯಸ್ ಇದ್ದು, ಗರಿಷ್ಠ ತಾಪಮಾನವು 19 ಡಿಗ್ರಿ ಸೆಲ್ಸಿಯಸ್‌ಗೆ ಏರುವ ನಿರೀಕ್ಷೆಯಿದೆ ಎಂದು ಐಎಂಡಿ ಹೇಳಿದೆ.
ದೆಹಲಿಯ ಗಾಳಿಯ ಗುಣಮಟ್ಟವು ಅತ್ಯಂತ ಕಳಪೆ ಮಟ್ಟದಲ್ಲಿದೆ. ಬೆಳಿಗ್ಗೆ 9 ಗಂಟೆಗೆ ವಾಯು ಗುಣಮಟ್ಟ ಸೂಚ್ಯಂಕ (AQI) 274ರಷ್ಟಿತ್ತು ಎಂದು ಕೇಂದ್ರ ಮಾಲಿನ್ಯ ನಿಯಂತ್ರಣ ಮಂಡಳಿಯ ಅಂಕಿ ಅಂಶ ತಿಳಿಸಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.