ADVERTISEMENT

ದೆಹಲಿ | ರಸ್ತೆಯಲ್ಲಿ ಯುವತಿಗೆ ಇರಿದ ಯುವಕನ ಬಂಧನ

​ಪ್ರಜಾವಾಣಿ ವಾರ್ತೆ
Published 5 ಸೆಪ್ಟೆಂಬರ್ 2025, 7:51 IST
Last Updated 5 ಸೆಪ್ಟೆಂಬರ್ 2025, 7:51 IST
<div class="paragraphs"><p>ಚಿತ್ರ ಕೃಪೆ : ಪ್ರಾತಿನಿಧಿಕ ಚಿತ್ರ</p></div>

ಚಿತ್ರ ಕೃಪೆ : ಪ್ರಾತಿನಿಧಿಕ ಚಿತ್ರ

   

ನವದೆಹಲಿ: ದೆಹಲಿಯ ನ್ಯೂ ಮುಸ್ತಫಾಬಾದ್ ಸಮೀಪ ಯುವತಿ ನಡೆದುಕೊಂಡು ಹೋಗುವಾಗ ಯುವಕನೊಬ್ಬ ಆಕೆಗೆ ಚಾಕುವಿನಿಂದ ಇರಿದು ಕೊಲೆಗೆ ಯತ್ನಿಸಿದ್ದಾನೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಘಟನೆಗೆ ಸಂಬಂಧಿಸಿದಂತೆ ದಯಾಳ್ ಪುರ ಪೊಲೀಸ್ ಠಾಣೆಗೆ ಕರೆ ಬಂದಿತ್ತು ಎಂದಿದ್ದಾರೆ. ಗಾಯಳು ಯುವತಿಯನ್ನು ಆಕೆಯ ಪೋಷಕರು ಜಿಟಿಬಿ ಆಸ್ಪತ್ರೆಗೆ ಸೇರಿಸಿ ಚಿಕಿತ್ಸೆ ಕೊಡಿಸುತ್ತಿದ್ದಾರೆ ಎಂದು ಪೊಲೀಸ್ ಅಧಿಕಾರಿ ಮಾಹಿತಿ ನೀಡಿದ್ದಾರೆ.

ADVERTISEMENT

ಘಟನೆ ನಡೆದ ಕೆಲವೇ ಹೊತ್ತಿನಲ್ಲಿ ಆರೋಪಿಯನ್ನು ಪತ್ತೆ ಹಚ್ಚಿ ಬಂಧಿಸಲಾಗಿದೆ. ಭಾರತೀಯ ನ್ಯಾಯ ಸಂಹಿತೆ ಪ್ರಕಾರ, ಕೊಲೆ ಯತ್ನಕ್ಕೆ ಸಂಬಂಧಿಸಿದಂತೆ ಸೆಕ್ಷನ್ 109(1) ಯುವಕನ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಯುವತಿ ಆರೋಗ್ಯ ಸುಧಾರಣೆ ಬಳಿಕ ಇನ್ನಷ್ಟು ಮಾಹಿತಿ ಕಲೆ ಹಾಕಲಾಗುವುದು ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.