ಕೆಂಪು ಕೋಟೆ ಬಳಿ ಕಾರ್ ಸ್ಫೋಟ
ನವದೆಹಲಿ: ದೆಹಲಿಯ ಕೆಂಪುಕೋಟೆ ಬಳಿ ಸೋಮವಾರ ನಡೆದ ಕಾರು ಸ್ಫೋಟವನ್ನು ‘ಭಯೋತ್ಪಾದಕ ಘಟನೆ’ ಎಂದು ಕರೆದಿರುವ ಕೇಂದ್ರ ಸರ್ಕಾರ, ಈ ಪ್ರಕರಣವನ್ನು ತನಿಖಾ ಸಂಸ್ಥೆಗಳು ಅತ್ಯಂತ ತ್ವರಿತ ಮತ್ತು ವೃತ್ತಿಪರತೆಯಿಂದ ನಿಭಾಯಿಸಬೇಕು ಹಾಗೂ ತಪ್ಪಿತಸ್ಥರ ವಿರುದ್ಧ ವಿಳಂಬವಿಲ್ಲದೆ ಕ್ರಮ ತೆಗೆದುಕೊಳ್ಳಬೇಕು ಎಂದು ನಿರ್ದೇಶಿಸಿದೆ.
ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಬುಧವಾರ ನಡೆದ ಸಂಪುಟ ಸಭೆಯಲ್ಲಿ, ಭಯೋತ್ಪಾದನೆ ವಿರುದ್ಧ ಶೂನ್ಯ ಸಹಿಷ್ಣು ನೀತಿಗೆ ಭಾರತ ಬದ್ಧವಾಗಿದೆ ಎಂದು ಪುನರುಚ್ಚರಿಸಲಾಯಿತು.
ಈ ಘಟನೆಯಲ್ಲಿ ಮೃತಪಟ್ಟವರ ಗೌರವಾರ್ಥ ಎರಡು ನಿಮಿಷ ಮೌನ ಆಚರಿಸಲಾಯಿತು. ಅಲ್ಲದೆ ಜೀವಹಾನಿ ಬಗ್ಗೆ ತೀವ್ರ ದುಃಖ ವ್ಯಕ್ತಪಡಿಸುವ ನಿರ್ಣಯವನ್ನು ಅಂಗೀಕರಿಸಲಾಯಿತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.