ನವದೆಹಲಿ: ಟ್ರ್ಯಾಕ್ಟರ್ ರ್‍ಯಾಲಿ ಸಂದರ್ಭ ದೆಹಲಿಯಲ್ಲಿ ನಡೆದ ಗಲಭೆಗೆ ಸಂಬಂಧಿಸಿ ಇದೇ ಮೊದಲ ಬಾರಿಗೆ ಕೇಂದ್ರ ಪ್ರತಿಕ್ರಿಯೆ ನೀಡಿದೆ. ರೈತರ ಚಳವಳಿಯನ್ನು ಪ್ರಚೋದಿಸಲು ಕಾಂಗ್ರೆಸ್ ನಿರಂತರವಾಗಿ ಯತ್ನಿಸಿದೆ ಎಂದು ಕೇಂದ್ರ ಸಚಿವ ಪ್ರಕಾಶ್ ಜಾವಡೇಕರ್ ಆರೋಪಿಸಿದ್ದಾರೆ.
26ರಂದು ನಡೆಯಲಿರುವುದು ಅಂತಿಮ ಪಂದ್ಯ ಎಂದು ಕೆಲವು ರೈತ ನಾಯಕರು ಹೇಳಿದ್ದರಿಂದ, ಪಂಜಾಬ್ ಸರ್ಕಾರವು ರಾಜ್ಯದಿಂದ ಹೊರಡುವ ಟ್ರ್ಯಾಕ್ಟರ್‌ಗಳ ಮೇಲೆ ನಿಗಾ ಇಡಬೇಕಿತ್ತು. ಮುನ್ನೆಚ್ಚರಿಕಾ ಕ್ರಮವಾಗಿ ಅಪರಾಧಿಗಳನ್ನು ವಶಕ್ಕೆ ಪಡೆದುಕೊಳ್ಳಬೇಕಾಗಿತ್ತು ಎಂದು ಜಾವಡೇಕರ್ ಹೇಳಿದ್ದಾರೆ.
ದೆಹಲಿಯಲ್ಲಿ ಮಂಗಳವಾರ ನಡೆದ ಹಿಂಸಾಚಾರವನ್ನು ತೀವ್ರವಾಗಿ ಖಂಡಿಸಬೇಕಿದೆ. ಘಟನೆಯಲ್ಲಿ ಶಾಮೀಲಾದವರೆಲ್ಲರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕಿದೆ. ಕೆಂಪುಕೋಟೆಯಲ್ಲಿ ತ್ರಿವರ್ಣ ಧ್ವಜಕ್ಕಾದ ಅವಮಾನವನ್ನು ಭಾರತ ಸಹಿಸುವುದಿಲ್ಲ ಎಂದೂ ಅವರುಹೇಳಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.