ADVERTISEMENT

ಪೌರತ್ವ ಕಾಯ್ದೆ ವಿರೋಧಿಸಿ ಪ್ರತಿಭಟನೆ: ದೆಹಲಿಯಲ್ಲಿ ಬಸ್ಸಿಗೆ ಬೆಂಕಿ

​ಪ್ರಜಾವಾಣಿ ವಾರ್ತೆ
Published 15 ಡಿಸೆಂಬರ್ 2019, 13:06 IST
Last Updated 15 ಡಿಸೆಂಬರ್ 2019, 13:06 IST
   

ನವದೆಹಲಿ: ಪೌರತ್ವ ತಿದ್ದುಪಡಿ ಕಾಯ್ದೆ ಜಾರಿ ವಿರೋಧಿಸಿ ಭಾನುವಾರ ದೆಹಲಿಯಲ್ಲಿ ಪ್ರತಿಭಟನೆ ನಡೆದಿದ್ದು, ಅಪರಿಚಿತರು ಬಸ್ಸಿಗೆ ಬೆಂಕಿ ಹಚ್ಚಿದ ಪರಿಣಾಮ ದೆಹಲಿ ಸಾರಿಗೆ ಸಂಸ್ಥೆಗೆ ಸೇರಿದ ಬಸ್ಸು ಸಂಪೂರ್ಣ ಸುಟ್ಟಿದೆ.

ಬೆಳಗ್ಗೆಯಿಂದ ಪ್ರತಿಭಟನೆ ನಡೆಸುತ್ತಿದ್ದರೂ ಅಂತಹ ಅಹಿತಕರ ಘಟನೆ ನಡೆದಿರಲಿಲ್ಲ. ಆದರೆ, ಸಂಜೆ ದುಷ್ಕರ್ಮಿಗಳು ದೆಹಲಿ ಸಾರಿಗೆ ಸಂಸ್ಥೆಗೆ ಸೇರಿದ ಬಸ್ಸಿಗೆ ಬೆಂಕಿ ಹಚ್ಚಿದ್ದಾರೆ ಎನ್ನಲಾಗಿದೆ. ಇಲ್ಲಿನ ಭಾರತ್ ನಗರದಲ್ಲಿ ಈ ಘಟನೆ ನಡೆದಿದ್ದು ಅಗ್ನಿಶಾಮಕದಳದ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಬೆಂಕಿ ನಂದಿಸಿದರಾದರೂ ಯಾವುದೇ ಪ್ರಯೋಜನವಾಗಲಿಲ್ಲ.

ಈ ಸಂಬಂಧ ಪೊಲೀಸರು ಸ್ಥಳಕ್ಕೆ ಧಾವಿಸಿದ್ದು ಪರಿಸ್ಥಿತಿ ಬಿಗುವಿನಿಂದ ಕೂಡಿದೆ. ಈ ಘಟನೆಯಲ್ಲಿ ಇಬ್ಬರು ಅಗ್ನಿಶಾಮಕದಳದ ಸಿಬ್ಬಂದಿ ಗಾಯಗೊಂಡಿದ್ದಾರೆ. ಪೌರತ್ವ ತಿದ್ದುಪಡಿ ಕಾಯ್ದೆ ಜಾರಿಗೆ ವಿರೋಧಿಸಿ ಈಶಾನ್ಯ ರಾಜ್ಯಗಳಲ್ಲಿ ಪ್ರತಿಭಟನೆಗಳು ನಡೆಯುತ್ತಿದ್ದು ಪೊಲೀಸರು ಹೆಚ್ಚಿನ ಭದ್ರತೆ ಕೈಗೊಂಡಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.