ADVERTISEMENT

ದೆಹಲಿಯಲ್ಲಿ ಬಿಸಿಗಾಳಿ: ರೆಡ್‌ ಅಲರ್ಟ್‌ ಘೋಷಣೆ

ಪಿಟಿಐ
Published 11 ಜೂನ್ 2025, 16:22 IST
Last Updated 11 ಜೂನ್ 2025, 16:22 IST
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ   

ನವದೆಹಲಿ: ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಬಿಸಿಗಾಳಿ ಬೀಸುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆಯು (ಐಎಂಡಿ) ‘ರೆಡ್‌ ಅಲರ್ಟ್‌’ ಘೋಷಿಸಿದೆ. ರಾಜಧಾನಿಯ ಹಲವು ಪ್ರದೇಶಗಳಲ್ಲಿ 45.5 ಡಿಗ್ರಿ ಸೆಲ್ಸಿಯಸ್‌ ಗರಿಷ್ಠ ಉಷ್ಣಾಂಶ ದಾಖಲಾದ ಬೆನ್ನಲ್ಲೇ ಈ ಎಚ್ಚರಿಕೆ ನೀಡಿದೆ.

ದೆಹಲಿ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮುಂದಿನ ಎರಡು ದಿನ ಬಿಸಿ ಗಾಳಿ ಬೀಸಲಿದೆ. ಬುಧವಾರ ಸಫ್ದರ್‌ಜಂಗ್‌ನಲ್ಲಿ 43.8 ಡಿಗ್ರಿ ಸೆ. ಉಷ್ಣಾಂಶ ಮತ್ತು ಅಯಾನಗರದಲ್ಲಿ 45.5 ಡಿಗ್ರಿ ಸೆ. ಉಷ್ಣಾಂಶ ದಾಖಲಾಗಿದೆ ಎಂದು ತಿಳಿಸಿದೆ.

ಜೂನ್‌ 13ರಂದು ಗುಡುಗು ಸಹಿತ ಸಾಧಾರಣ ಮಳೆಯಾಗಲಿದ್ದು, ನಂತರ ಪರಿಸ್ಥಿತಿ ಅಲ್ಪ ಮಟ್ಟಿಗೆ ಸುಧಾರಿಸಲಿದೆ ಎಂದು ತಿಳಿಸಿದೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.