ADVERTISEMENT

ಕೇಂದ್ರ ಸಚಿವ ಸಂಪುಟ ಸಭೆ: ಕೋವಿಡ್‌, ಲಾಕ್‌ಡೌನ್‌, ರಫೇಲ್ ಬಗ್ಗೆ ಚರ್ಚೆ ಸಾಧ್ಯತೆ

ಏಜೆನ್ಸೀಸ್
Published 29 ಜುಲೈ 2020, 6:08 IST
Last Updated 29 ಜುಲೈ 2020, 6:08 IST
ಕೇಂದ್ರ ಸಚಿವ ಸಂಪುಟ
ಕೇಂದ್ರ ಸಚಿವ ಸಂಪುಟ   

ನವದೆಹಲಿ: ಕೇಂದ್ರ ಸಚಿವ ಸಂಪುಟದ ಸಭೆ ಇಂದು(ಬುಧವಾರ) ನಡೆಯಲಿದ್ದು, ಸಭೆಯಲ್ಲಿ ಹಲವು ಪ್ರಮುಖ ನಿರ್ಧಾರಗಳನ್ನು ತೆಗೆದುಕೊಳ್ಳುವ ನಿರೀಕ್ಷೆಯಿದೆ.

ದೆಹಲಿಯ ಲೋಕ ಕಲ್ಯಾಣ್ ಮಾರ್ಗದಲ್ಲಿರುವ ಪ್ರಧಾನಿ ಮೋದಿಯವರ ನಿವಾಸದಲ್ಲಿ ಸಂಜೆ 7 ಗಂಟೆಗೆ ಸಭೆ ನಡೆಯಲಿದೆ ಎಂದು ಎಎನ್‌ಐ ಸುದ್ದಿ ಸಂಸ್ಥೆ ಮಾಹಿತಿ ನೀಡಿದೆ.

ಕೋವಿಡ್‌ ಬಿಕ್ಕಟ್ಟು, ಲಾಕ್‌ಡೌನ್‌ ಪ್ರಕ್ರಿಯೆ, ಅಸ್ಸಾಂ ಪ್ರವಾಹ ಮತ್ತು ರಫೇಲ್‌ ಯುದ್ಧ ವಿಮಾನ ಸೇರಿದಂತೆ ಹಲವು ಪ್ರಮುಖ ವಿಚಾರಗಳ ಬಗ್ಗೆ ಚರ್ಚೆಯಾಗುವ ಸಾಧ್ಯತೆಗಳಿವೆ.

ADVERTISEMENT

ಜುಲೈ 8ರಂದು ನಡೆದಿದ್ದ ಕಳೆದ ಬಾರಿಯ ಸಚಿವ ಸಂಪುಟ ಸಭೆಯಲ್ಲಿ ಪ್ರಧಾನ ಮಂತ್ರಿ ಗರೀಬ್ ಕಲ್ಯಾಣ್ ಅನ್ನ ಯೋಜನೆಯ ವಿಸ್ತರಣೆಗೆ ಅನುಮೋದನೆ ನೀಡಲಾಗಿತ್ತು.

ಪ್ರಧಾನ್ ಮಂತ್ರಿ ಆವಾಸ್ ಯೋಜನೆ ಅಡಿಯಲ್ಲಿ ನಗರಗಳ ಬಡ ನಿವಾಸಿಗಳಿಗೆ ಕೈಗೆಟುಕುವ ಬಾಡಿಗೆ ವಸತಿ ಸಂಕೀರ್ಣಗಳನ್ನು ಅಭಿವೃದ್ಧಿಪಡಿಸಲು ಒಪ್ಪಿಗೆ ಸೂಚಿಸಲಾಗಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.