ADVERTISEMENT

ಸೂಕ್ಷ್ಮತೆಗಳಿಲ್ಲದ ನಾಯಕರನ್ನು ಆಯ್ಕೆ ಮಾಡಿದ್ದಕ್ಕೆ ಬೆಲೆ ತೆರಬೇಕಾಗಿದೆ: ಚಿದಂಬರಂ

​ಪ್ರಜಾವಾಣಿ ವಾರ್ತೆ
Published 25 ಫೆಬ್ರುವರಿ 2020, 11:55 IST
Last Updated 25 ಫೆಬ್ರುವರಿ 2020, 11:55 IST
ಕಾಂಗ್ರೆಸ್‌ ನಾಯಕ ಪಿ.ಚಿದಂಬರಂ
ಕಾಂಗ್ರೆಸ್‌ ನಾಯಕ ಪಿ.ಚಿದಂಬರಂ   

ನವದೆಹಲಿ: ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಭುಗಿಲೆದ್ದಿರುವ ಹಿಂಸಾಚಾರದ ಬಗ್ಗೆ ಕಾಂಗ್ರೆಸ್‌ ನಾಯಕ ಪಿ.ಚಿದಂಬರಂ ತೀವ್ರ ಕಳವಳ ವ್ಯಕ್ತಪಡಿಸಿದ್ದಾರೆ.

ಪ್ರಧಾನಿ ಮೋದಿ ಮತ್ತು ಕೇಂದ್ರ ಗೃಹ ಸಚಿವ ಅಮಿತ್‌ ಶಾ ಅವರನ್ನು ಗುರಿಯಾಗಿಸಿ ವಾಗ್ದಾಳಿ ನಡೆಸಿರುವ ಅವರು, ‘ದೂರದೃಷ್ಟಿ ಹಾಗೂ ಸೂಕ್ಷ್ಮತೆಗಳನ್ನು ಹೊಂದಿರದನಾಯಕರನ್ನು ಆಯ್ಕೆ ಮಾಡಿದ್ದಕ್ಕೆ ಇಂದು ಬೆಲೆ ತೆರೆಬೇಕಾಗಿ ಬಂದಿದೆ‘ ಎಂದು ತಿಳಿಸಿದ್ದಾರೆ.

ಸರ್ಕಾರವು ಸಿಎಎ ವಿರೋಧಿ ‍ಪ್ರತಿಭಟನಾಕಾರರ ಧನಿಯನ್ನು ಆಲಿಸಬೇಕು. ದೆಹಲಿಯಲ್ಲಿ ನಡೆಯುತ್ತಿರುವ ಬೆಳವಣಿಗೆಗಳು ತೀವ್ರ ಆತಂಕಕಾರಿಯಾಗಿವೆ. ಪೌರತ್ವ ತಿದ್ದುಪಡಿ ಕಾಯ್ದೆಯು ಜನರನ್ನು ಇಬ್ಬಾಗಿಸುತ್ತದೆ ಎಂದು ಚಿದಂಬರಂ ಕಳವಳ ವ್ಯಕ್ತಪಡಿಸಿದ್ದಾರೆ.

ADVERTISEMENT

ಸೋಮವಾರ ದೆಹಲಿಯಲ್ಲಿ ಭುಗಿಲೆದ್ದ ಹಿಂಸಾಚಾರದಲ್ಲಿ ಓರ್ವ ಪೊಲೀಸ್ ಹೆಡ್‌ಕಾನ್ಸ್‌ಟೆಬಲ್ ಸೇರಿ ಏಳು ಜನ ಮೃತಪಟ್ಟಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.