ಭಾರಿ ನೀರು ತುಂಬಿರುವ ರಸ್ತೆಯಲ್ಲಿ ಸಂಚರಿಸಲು ಹರಸಾಹಸ ನಡೆಸುತ್ತಿರುವ ಜನರು
ಪಿಟಿಐ ಚಿತ್ರ
ನವದೆಹಲಿ: ಭಾರಿ ಮಳೆಯಿಂದಾಗಿ ರಾಷ್ಟ್ರ ರಾಜಧಾನಿ ದೆಹಲಿಯ ಹಲವು ಪ್ರದೇಶಗಳಲ್ಲಿ ನೀರು ನಿಂತಿದ್ದು, ಟ್ರಾಫಿಕ್ ಸಮಸ್ಯೆ ಎದುರಾಗಿದೆ. ಈ ಹಿನ್ನೆಲೆಯಲ್ಲಿ ಪರಿಸ್ಥಿತಿಯ ಮಾಹಿತಿ ಪಡೆಯಲು ದೆಹಲಿ ಸರ್ಕಾರ ತುರ್ತು ಸಭೆ ಕರೆದಿದೆ.
ಮಧ್ಯಾಹ್ನ ನಡೆಯುವ ಸಭೆಗೆ ಎಲ್ಲ ಸಚಿವರು ಹಾಗೂ ಉನ್ನತ ಅಧಿಕಾರಿಗಳು ಹಾಜರಾಗಲಿದ್ದಾರೆ.
ಭಾರಿ ಮಳೆಯಿಂದಾಗಿ ಜನಜೀವನ ಅಸ್ತವ್ಯಸ್ತಗೊಂಡಿದೆ. ದೆಹಲಿ ವಿಮಾನ ನಿಲ್ದಾಣದ ಟರ್ಮಿನಲ್–1ರ ಮೇಲ್ಛಾವಣಿಯ ಒಂದು ಭಾಗ ಕುಸಿದಿದೆ. ಈ ಘಟನೆಯಿಂದಾಗಿ ಒಬ್ಬರು ಮೃತಪಟ್ಟಿದ್ದು, ಆರು ಮಂದಿ ಗಾಯಗೊಂಡಿದ್ದಾರೆ.
ಬೆಳಿಗ್ಗೆ 3ಕ್ಕೆ ಆರಂಭವಾದ ಮಳೆ ಸುಮಾರು 15.37 ಸೆಂ.ಮೀ. ಯಷ್ಟು ಸುರಿದಿದೆ ಎಂದು ಸಫ್ದರ್‌ಜಂಗ್ ಹವಾಮಾನ ಕೇಂದ್ರ ಅಂದಾಜಿಸಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.