ADVERTISEMENT

ಲಾಕ್‌ಡೌನ್‌ನಿಂದಾಗಿ ದೆಹಲಿಯಲ್ಲಿ ಮಾಲಿನ್ಯ ಕ್ಷೀಣ, ಸೌರಶಕ್ತಿ ಉತ್ಪಾದನೆ ಹೆಚ್ಚಳ

ಪಿಟಿಐ
Published 23 ಜೂನ್ 2020, 11:28 IST
Last Updated 23 ಜೂನ್ 2020, 11:28 IST
ಸೌರ ಫಲಕ
ಸೌರ ಫಲಕ   

ಬಾಸ್ಟನ್‌: ಲಾಕ್‌ಡೌನ್‌ನಿಂದಾಗಿ ದೆಹಲಿಯಲ್ಲಿ ವಾಯು ಮಾಲಿನ್ಯ ಕಡಿಮೆಯಾಗಿದ್ದು, ಸೌರ ಫಲಕಗಳ ಮೇಲೆ ಸೂರ್ಯನ ಬೆಳಕು ಪ್ರಕಾಶಮಾನವಾಗಿ ಬೀಳುತ್ತಿರುವುದರಿಂದ ಹೆಚ್ಚು ಸೌರ ವಿದ್ಯುತ್‌ ಉತ್ಪಾದನೆಯಾಗುತ್ತಿದೆ ಎಂದು ದೆಹಲಿಯಲ್ಲಿ ನಡೆಸಿದ ಸರ್ವೇಯಿಂದ ತಿಳಿದುಬಂದಿದೆ.

ದೆಹಲಿಯಲ್ಲಿ2017 ಮತ್ತು 2019ರಲ್ಲಿ ಉತ್ಪಾದನೆಯಾದ ವಿದ್ಯುತ್‌ಗೆ ಹೋಲಿಸಿದರೆ ಮಾರ್ಚ್ ತಿಂಗಳ ಅಂತ್ಯದಲ್ಲಿ‌ ಶೇಕಡ 8ರಷ್ಟು ಹೆಚ್ಚು ಉತ್ಪಾದನೆಯಾಗಿದೆ ಎಂದು ವಿಜ್ಞಾನಿಗಳು ತಿಳಿಸಿದ್ದಾರೆ.

ವಿಶ್ವದಲ್ಲಿ ಅತಿ ಹೆಚ್ಚು ಮಾಲಿನ್ಯಗೊಂಡ ನಗರದಲ್ಲಿ ದೆಹಲಿಯೂ ಒಂದು. ಆದರೆ, ದೇಶದಲ್ಲಿ ಹೇರಲಾದ ಲಾಕ್‌ಡೌನ್‌ನಿಂದಾಗಿ ದೆಹಲಿಯಲ್ಲಿ ಏಕಾಏಕಿಮಾಲಿನ್ಯ ಕಡಿಮೆಯಾಗಿದೆ. ಇದರಿಂದಾಗಿ ಸೌರ ಫಲಕಗಳ ಮೇಲೆ ಬೆಳಕು ಪ್ರಕಾಶಮಾನವಾಗಿ ಬೀಳುತ್ತಿದೆ ಎಂದುಅಮೆರಿಕದ ಮ್ಯಾಸಚೂಸೆಟ್ಸ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ನಡೆಸಿದ ಸಂಶೋಧನೆಯಲ್ಲಿ ತಿಳಿದುಬಂದಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.