ADVERTISEMENT

ಕೋವಿಡ್‌-19: ಮಹಾರಾಷ್ಟ್ರದಲ್ಲಿ ಡೆಲ್ಟಾ ಪ್ಲಸ್‌ ಪ್ರಕರಣಗಳ ಸಂಖ್ಯೆ 65ಕ್ಕೆ ಏರಿಕೆ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 11 ಆಗಸ್ಟ್ 2021, 16:28 IST
Last Updated 11 ಆಗಸ್ಟ್ 2021, 16:28 IST
ಪ್ರಾತಿನಿಧಿಕ ಚಿತ್ರ
ಪ್ರಾತಿನಿಧಿಕ ಚಿತ್ರ    

ಮುಂಬೈ: ಕೊರೊನಾ ವೈರಸ್‌ನ ಡೆಲ್ಟಾ ಪ್ಲಸ್‌ ರೂಪಾಂತರದ ಕನಿಷ್ಠ 20 ಹೊಸ ಪ್ರಕರಣಗಳು ಮಹಾರಾಷ್ಟ್ರದಲ್ಲಿ ಪತ್ತೆಯಾಗಿವೆ.

ಈ ವರೆಗೆ ರಾಜ್ಯದಲ್ಲಿ ಡೆಲ್ಟಾ ಪ್ಲಸ್‌ ಸೋಂಕಿತರ ಸಂಖ್ಯೆ 65ಕ್ಕೆ ಏರಿಕೆಯಾಗಿದೆ ಎಂದು ಮಹಾರಾಷ್ಟ್ರದ ಆರೋಗ್ಯ ಇಲಾಖೆ ಬುಧವಾರ ಮಾಹಿತಿ ನೀಡಿದೆ.

ಮುಂಬೈನಲ್ಲಿ 7, ಪುಣೆಯಲ್ಲಿ 3, ಪಾಲ್ಘರ್ ಮತ್ತು ರಾಯಗಢದಲ್ಲಿ ತಲಾ 2 ಹೊಸ ಪ್ರಕರಣಗಳು ಬೆಳಕಿಗೆ ಬಂದಿವೆ.

ADVERTISEMENT

ಒಟ್ಟು ಸೋಂಕಿತರ ಪೈಕಿ 33 ಮಹಿಳೆಯರು ಮತ್ತು 32 ಪುರುಷರು ಇದ್ದಾರೆ. ಅದರಲ್ಲಿ 33 ಸೋಂಕಿತರು 19ರಿಂದ 45ರ ವರೆಗಿನ ವಯೋಮಾನದವರಾಗಿದ್ದಾರೆ.

ಡೆಲ್ಟಾ ಪ್ಲಸ್‌ ಹರಡುವಿಕೆಯನ್ನು ತಡೆಯಲು ಉದ್ದವ್‌ ಠಾಕ್ರೆ ನೇತೃತ್ವದ ಮಹಾರಾಷ್ಟ್ರ ಸರ್ಕಾರವು ಕಠಿಣ ಕ್ರಮಗಳನ್ನು ತೆಗೆದುಕೊಂಡಿದೆ ಎಂದು ಆರೋಗ್ಯ ಸಚಿವಾಲಯ ಹೇಳಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.