ADVERTISEMENT

ಅತ್ಯಾಚಾರ ಪ್ರಕರಣಗಳ ತ್ವರಿತ ತನಿಖೆಗೆ ಹಲವು ಸಂಘಟನೆಗಳ ಒತ್ತಾಯ

ಪಿಟಿಐ
Published 27 ಆಗಸ್ಟ್ 2024, 15:47 IST
Last Updated 27 ಆಗಸ್ಟ್ 2024, 15:47 IST
   

ನವದೆಹಲಿ: ದೇಶದ ಬೇರೆ ಬೇರೆ ರಾಜ್ಯಗಳಿಂದ ವರದಿಯಾಗಿರುವ ಅತ್ಯಾಚಾರ ಪ್ರಕರಣಗಳ ವಿಚಾರಣೆಯನ್ನು ತ್ವರಿತವಾಗಿ ನಡೆಸಬೇಕು ಎಂದು ಮಹಿಳಾ ಹಕ್ಕುಗಳ ಪರ ಸಂಘಟನೆಗಳು ಸೇರಿದಂತೆ ಹಲವು ಸಂಘಟನೆಗಳು ಒತ್ತಾಯಿಸಿವೆ.

ಕೆಲವು ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳು ಅತ್ಯಾಚಾರ ಪ್ರಕರಣಗಳನ್ನು ರಾಜಕೀಯಕ್ಕೆ ಬಳಸಿಕೊಳ್ಳಲು ಯತ್ನಿಸುತ್ತಿದ್ದಾರೆ ಎಂದು ಅವು ಟೀಕಿಸಿವೆ.

ಅಖಿಲ ಭಾರತ ದಲಿತ ಮಹಿಳಾ ಅಧಿಕಾರ ಮಂಚ್, ಅಖಿಲ ಭಾರತ ಪ್ರಜಾತಾಂತ್ರಿಕ ಮಹಿಳಾ ಸಂಘಟನೆ, ಅಖಿಲ ಭಾರತ ಮಹಿಳಾ ಸಾಂಸ್ಕೃತಿಕ ಸಂಘಟನೆ ಸೇರಿದಂತೆ ಒಟ್ಟು 35 ಸಂಘಟನೆಗಳು ಜಂಟಿಯಾಗಿ ಹೇಳಿಕೆ ಬಿಡುಗಡೆ ಮಾಡಿವೆ. 

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.