ADVERTISEMENT

ದೆಹಲಿ: ಕನಿಷ್ಠ ತಾಪಮಾನ 3.3 ಡಿಗ್ರಿ ಸೆಲ್ಸಿಯಸ್‌

ಪಿಟಿಐ
Published 31 ಡಿಸೆಂಬರ್ 2020, 6:21 IST
Last Updated 31 ಡಿಸೆಂಬರ್ 2020, 6:21 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ನವದೆಹಲಿ: ದೆಹಲಿಯಲ್ಲಿ ಗುರುವಾರ ಕನಿಷ್ಠ ತಾಪಮಾನವು 3.3 ಡಿ‌ಗ್ರಿ ಸೆಲ್ಸಿಯಸ್‌ಗೆ ಕುಸಿದಿದೆ. ಇದರಿಂದಾಗಿ ನಗರದಲ್ಲಿ ದಟ್ಟವಾದ ಮಂಜು ಕವಿದ ವಾತಾವರಣ ಸೃಷ್ಟಿಯಾಗಿದೆ ಎಂದು ಭಾರತೀಯ ಹವಾಮಾನ ಇಲಾಖೆ (ಐಎಂಡಿ) ತಿಳಿಸಿದೆ.

ಸತತ ಮೂರನೇ ದಿನವೂ ನಗರದಲ್ಲಿ ಶೀತ ಅಲೆಯ ಪರಿಸ್ಥಿತಿ ಮುಂದುವರಿದಿದೆ ಎಂದು ಐಎಂಡಿಯ ಪ್ರಾದೇಶಿಕ ಕಚೇರಿಯ ಮುಖ್ಯಸ್ಥ ಕುಲ್‌ದೀಪ್‌ ಶ್ರೀವಾಸ್ತವ್‌ ಹೇಳಿದರು.

ಲೋಧಿ ರಸ್ತೆಯಲ್ಲಿ ಕನಿಷ್ಠ ತಾಪಮಾನವು 3.1 ಡಿಗ್ರಿ ಸೆಲ್ಸಿಯಸ್‌ ದಾಖಲಾಗಿದೆ. ದೆಹಲಿ–ಎನ್‌ಸಿಆರ್‌, ಪಂಜಾಬ್‌, ಹರಿಯಾಣ, ಉತ್ತರ ಪ್ರದೇಶದ ಹಲವು ಭಾಗಗಳಲ್ಲಿ ದಟ್ಟವಾದ ಮಂಜು ಕವಿದ ವಾತಾವರಣ ಸೃಷ್ಟಿಯಾಗುವ ಸಾಧ್ಯತೆ ಇದೆ ಎಂದು ಶ್ರೀವಾಸ್ತವ್‌ ತಿಳಿಸಿದರು.

ADVERTISEMENT

ದೆಹಲಿಯಲ್ಲಿ ಶುಕ್ರವಾರವೂ ಶೀತ ಅಲೆಯ ಪರಿಸ್ಥಿತಿ ನಿರ್ಮಾಣವಾಗುವ ಸಾಧ್ಯತೆ ಇದೆ. ಆದರೆನಂತರದ ದಿನಗಳಲ್ಲಿ ಹಿಮಾಲಯದ ಹವೆಯಲ್ಲಿ ಉಂಟಾಗುವ ಬದಲಾವಣೆಯಿಂದ ತಾಪಮಾನದಲ್ಲಿ ಏರಿಕೆಯಾಗುವ ಸಾಧ್ಯತೆ ಇದೆ. ಜನವರಿ 1ರಿಂದ 6ರ ತನಕ ಕನಿಷ್ಠ ತಾಪಮಾನದಲ್ಲಿ ಏರಿಕೆಯಾಗಬಹುದು. ಅಲ್ಲದೆ ಜನವರಿ 3ರಿಂದ 5ರ ತನಕ ಸ್ವಲ್ಪ ಮಟ್ಟಿಗೆ ಮಳೆಯಾಗುವ ಸಾಧ್ಯತೆಯೂ ಇದೆ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.