ADVERTISEMENT

ವಾಯುಭಾರ ಕುಸಿತ: ಕರ್ನಾಟಕ, ಆಂಧ್ರ, ತಮಿಳುನಾಡಿನಲ್ಲಿ ಭಾರಿ ಮಳೆ

ಪಿಟಿಐ
Published 19 ನವೆಂಬರ್ 2021, 7:33 IST
Last Updated 19 ನವೆಂಬರ್ 2021, 7:33 IST
ಚೆನ್ನೈನಲ್ಲಿ ಭಾರಿ ಮಳೆ (ಸಂಗ್ರಹ ಚಿತ್ರ)
ಚೆನ್ನೈನಲ್ಲಿ ಭಾರಿ ಮಳೆ (ಸಂಗ್ರಹ ಚಿತ್ರ)   

ಚೆನ್ನೈ: ಬಂಗಾಳಕೊಲ್ಲಿಯಲ್ಲಿ ಉಂಟಾಗಿದ್ದ ವಾಯುಭಾರ ಕುಸಿತ ಶುಕ್ರವಾರ ಮುಂಜಾನೆ ತಮಿಳುನಾಡು ಮತ್ತು ಆಂಧ್ರಪ್ರದೇಶದ ನಡುವಿರುವ ಕರಾವಳಿಯಲ್ಲಿ ಕಾಣಿಸಿಕೊಂಡಿದ್ದು, ಇದು ಕ್ರಮೇಣ ದುರ್ಬಲಗೊಳ್ಳಲಿದೆ ಎಂದು ಭಾರತೀಯ ಹವಾಮಾನ ಇಲಾಖೆ (ಐಎಂಡಿ) ತಿಳಿಸಿದೆ.

ಹವಾಮಾನ ಇಲಾಖೆ ಮುನ್ಸೂಚನೆ ಪ್ರಕಾರ ತಮಿಳುನಾಡಿನಲ್ಲಿ ಹೆಚ್ಚು ಮಳೆಯಾಗಲಿದೆ. ಆಂಧ್ರಪ್ರದೇಶ ಮತ್ತು ಕರ್ನಾಟಕದ ಕೆಲವು ಭಾಗಗಳಲ್ಲೂ ಭಾರಿ ಮಳೆಯಾಗುವ ಸಾಧ್ಯತೆ ಇದೆ.

ಇದೇ ವೇಳೆ ಶುಕ್ರವಾರ ಬೆಳಿಗ್ಗೆಯಿಂದ ತಮಿಳುನಾಡಿನ ಉತ್ತರದ ಜಿಲ್ಲೆಗಳು ಮತ್ತು ನೆರೆಯ ಪುದುಚೇರಿಯಲ್ಲಿ ಮಳೆ ಪ್ರಮಾಣ ಏರಿಕೆಯಾಗಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.