ADVERTISEMENT

ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ: ಚಂಡಮಾರುತವಾಗಿ ಮಾರ್ಪಡುವ ಸಾಧ್ಯತೆ

ಪಿಟಿಐ
Published 1 ಡಿಸೆಂಬರ್ 2023, 6:09 IST
Last Updated 1 ಡಿಸೆಂಬರ್ 2023, 6:09 IST
<div class="paragraphs"><p>ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ</p></div>

ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ

   

(ಚಿತ್ರ ಕೃಪೆ–ಪಿಟಿಐ)

ಭುವನೇಶ್ವರ: ಬಂಗಾಳಕೊಲ್ಲಿಯಲ್ಲಿ ಶುಕ್ರವಾರ ವಾಯುಭಾರ ಕುಸಿತ ಉಂಟಾಗಿದ್ದು, ಅದು ಇನ್ನೆರೆಡು ದಿನದಲ್ಲಿ ಚಂಡಮಾರುತವಾಗಿ ಮಾರ್ಪಾಡುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಮುನ್ಸೂಚನೆ ನೀಡಿದೆ.

ADVERTISEMENT

ಚಂಡಮಾರುತ ಆಂಧ್ರಪ್ರದೇಶದ ಮಚಲಿಪಟ್ಟಣಂ ಮತ್ತು ಚೆನ್ನೈ ನಡುವೆ ಡಿ.4ರ ಸಂಜೆಯ ವೇಳೆಗೆ ಕರಾವಳಿಯನ್ನು ದಾಟಲಿದೆ ಎಂದು ಐಎಂಡಿ ಅಂದಾಜಿಸಿದೆ.

ಶುಕ್ರವಾರ ಮುಂಜಾನೆ 5.30ಕ್ಕೆ ಚಂಡಮಾರುತ ಚೆನ್ನೈನಿಂದ 800 ಕಿಮೀ, ಮಚಲಿಪಟ್ಟಣದಿಂದ 970 ಕಿಮೀ, ಆಂಧ್ರಪ್ರದೇಶದ ಬಾಪಟ್ಲಾದಿಂದ 990 ಕಿಮೀ ಮತ್ತು ಪುದುಚೇರಿಯಿಂದ 790 ಕಿಮೀ ದೂರದಲ್ಲಿ ಸಮುದ್ರದಲ್ಲಿ ಕೇಂದ್ರೀಕೃತವಾಗಿತ್ತು.

ಇದು ಪಶ್ಚಿಮ ಮತ್ತು ವಾಯುವ್ಯದ ಕಡೆಗೆ ಚಲಿಸುವ ಸಾಧ್ಯತೆಯಿದೆ. ಡಿ.2 ಹಾಗೂ 3ರ ನಡುವೆ ತೀವ್ರ ಸ್ವರೂಪದ ಚಂಡಮಾರುತವಾಗಿ ರೂಪುಗೊಳ್ಳಲಿದೆ.

ಬಳಿಕ ಅದೇ ದಿಕ್ಕಿನಲ್ಲಿ ಚಲಿಸಿ ಡಿ.4ರ ಸಂಜೆ ದಕ್ಷಿಣ ಆಂಧ್ರಪ್ರದೇಶ ಮತ್ತು ಪಕ್ಕದ ಉತ್ತರ ತಮಿಳುನಾಡು ಕರಾವಳಿಯನ್ನು ದಾಟಲಿದೆ ಎಂದು ಐಎಂಡಿ ಹೇಳಿಕೆಯಲ್ಲಿ ತಿಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.