ನವದೆಹಲಿ: ಕೊರೊನಾ ವೈರಸ್ ಸೋಂಕಿನಿಂದಾಗಿ ದೆಹಲಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರನ್ನು ಬುಧವಾರ ಆಸ್ಪತ್ರೆಗೆ ದಾಖಲಿಸಲಾಗಿದೆ.
48 ವರ್ಷದ ಆಮ್ ಆದ್ಮಿ ಪಕ್ಷದ ನಾಯಕ ಸಿಸೋಡಿಯಾ ಅವರಿಗೆಉಸಿರಾಟದ ಸಮಸ್ಯೆ ಮತ್ತು ಜ್ವರ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಸಂಜೆ 4 ಗಂಟೆ ಸುಮಾರಿಗೆ ಲೋಕ ನಾಯಕ ಜೈ ಪ್ರಕಾಶ್ ನಾರಾಯಣ ಆಸ್ಪತ್ರೆಗೆ ದಾಖಲಿಸಲಾಗಿದೆ. ಅವರ ಮೇಲೆ ತೀವ್ರ ನಿಗಾವಹಿಸಲಾಗಿದೆ ಎಂದು ಅವರು ಹೇಳಿದರು.
ಸೆಪ್ಟಂಬರ್ 14ರಂದು ನಡೆಸಿದ ಪರೀಕ್ಷೆಯಲ್ಲಿ ಕೊರೊನಾ ವೈರಸ್ ಸೋಂಕು ತಗುಲಿರುವುದು ದೃಢಪಟ್ಟಿದ್ದು, ಅಂದಿನಿಂದ ಹೋಂ ಕ್ವಾರಂಟೈನ್‌ನಲ್ಲಿದ್ದರು.
ಸೆಪ್ಟೆಂಬರ್ 14 ರಂದು ನಡೆದ ಏಕದಿನ ಅಧಿವೇಶನಕ್ಕೆ ಹಾಜರಾಗಲು ಸಿಸೋಡಿಯಾ ಅವರಿಗೆ ಸಾಧ್ಯವಾಗಿರಲಿಲ್ಲ. ಇದಕ್ಕೂ ಮುನ್ನ ಬುಧವಾರ ಅವರು ಟ್ವಿಟ್ಟರ್‌ನಲ್ಲಿ ಕೊಂಡ್ಲಿ ಶಾಸಕ ಕುಕ್ದೀಪ್ ಕುಮಾರ್ ಅವರ ಪುತ್ರಿ ಅವರಿಗೆ ಹುಟ್ಟುಹಬ್ಬದ ಶುಭಾಶಯಗಳನ್ನು ತಿಳಿಸಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.