ಚಂಡೀಗಡ: ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಜೈಲುಶಿಕ್ಷೆ ಅನುಭವಿಸುತ್ತಿರುವ ಡೇರಾ ಸಚ್ಚಾ ಸೌದಾದ ಮುಖ್ಯಸ್ಥ ಗುರ್ಮೀತ್ ರಾಮ್ ರಹೀಮ್ ಸಿಂಗ್‌ಗೆ ಮೂರು ವಾರಗಳ ಫರ್ಲೊ (ದೀರ್ಘಾವಧಿ ಶಿಕ್ಷೆಗೆ ಒಳಗಾದವರನ್ನು ಕೆಲ ದಿನಗಳ ಮಟ್ಟಿಗೆ ಬಿಡುಗಡೆ ಮಾಡುವುದು) ಮಂಜೂರು ಮಾಡಲಾಗಿದೆ ಎಂದು ಅಧಿಕಾರಿಗಳು ಸೋಮವಾರ ತಿಳಿಸಿದ್ದಾರೆ.
ಸಿರ್ಸಾ ಆಶ್ರಮದಲ್ಲಿ ಇಬ್ಬರು ಮಹಿಳಾ ಅನುಯಾಯಿಗಳ ಮೇಲೆ ಅತ್ಯಾಚಾರ ಎಸಗಿದ ಪ್ರಕರಣಕ್ಕೆ ಸಂಬಂಧಿಸಿದಂತೆ 54 ವರ್ಷದ ಗುರ್ಮಿತ್ ಹರಿಯಾಣದ ರೋಹ್ಟಕ್‌ನ ಸುನಾರಿಯಾ ಕಾರಾಗೃಹದಲ್ಲಿ ಜೈಲುಶಿಕ್ಷೆ ಅನುಭವಿಸುತ್ತಿದ್ದಾನೆ.
2017ರಲ್ಲಿ ವಿಶೇಷ ಸಿಬಿಐ ನ್ಯಾಯಾಲಯ ಗುರ್ಮಿತ್‌ಗೆ 20 ವರ್ಷಗಳ ಜೈಲು ಶಿಕ್ಷೆ ವಿಧಿಸಿತ್ತು.
ವಿಧಾನಸಭಾ ಚುನಾವಣೆ ನಡೆಯಲಿರುವ ಉತ್ತರ ಪ್ರದೇಶ ಹಾಗೂ ಪಂಜಾಬ್‌ನಲ್ಲಿ ಡೇರಾ ಸಚ್ಚಾ ಸೌದಾದ ಸಿರ್ಸಾ ಆಶ್ರಮದ ಅನುಯಾಯಿಗಳು ಹೆಚ್ಚಿನ ಸಂಖ್ಯೆಯಲ್ಲಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.