ನವದೆಹಲಿ: ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಜೈಲು ವಾಸ ಅನುಭವಿಸುತ್ತಿರುವ ಡೇರಾ ಸಚ್ಚಾ ಸೌದಾ ಮುಖ್ಯಸ್ಥ ಗುರ್ಮೀತ್ ರಾಮ್ ರಹೀಮ್ ಅವರಿಗೆ ಮೂರು ವಾರಗಳ ಪೆರೋಲ್ ಮಂಜೂರು ಮಾಡಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಗುರುಗ್ರಾಮ್‌ನಲ್ಲಿರುವ ಅವರ ಫಾರ್ಮ್‌ಹೌಸ್‌ನಲ್ಲಿ ಉಳಿಯಲು ಡೇರಾ ಮುಖ್ಯಸ್ಥರಿಗೆ ಅವಕಾಶ ನೀಡಲಾಗಿದೆ. ಅವರ ಕರ್ಮಭೂಮಿ ಸಿರ್ಸಾಗೆ ಭೇಟಿ ನೀಡಲು ಅವಕಾಶವನ್ನು ನಿರಾಕರಿಸಲಾಗಿದೆ ಎಂದು ಪೊಲೀಸರು ಖಚಿತಪಡಿಸಿದ್ದಾರೆ.
‘ಗುರ್ಮೀತ್ ರಾಮ್ ರಹೀಮ್ ಸಿಂಗ್ ಅವರಿಗೆ ಫೆಬ್ರವರಿ 7 ರಿಂದ 20 ರವರೆಗೆ ಪೆರೋಲ್ ನೀಡಲಾಗಿದೆ. ಕುಟುಂಬ ಸದಸ್ಯರನ್ನು ಹೊರತುಪಡಿಸಿ, ಡೇರಾ ಮುಖ್ಯಸ್ಥರು ಯಾರನ್ನೂ ಭೇಟಿಯಾಗಲು ಅನುಮತಿ ಇಲ್ಲ. ಅವರನ್ನು ನಾವು ಇಂದು(ಸೋಮವಾರ) ಸಂಜೆಯೊಳಗೆ ಬಿಡುಗಡೆ ಮಾಡುತ್ತೇವೆ’ ಎಂದು ಜೈಲಿನ ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ.
ಇಬ್ಬರು ಮಹಿಳಾ ಅನುಯಾಯಿಗಳ ಮೇಲೆ ಅತ್ಯಾಚಾರ ನಡೆಸಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಗುರ್ಮೀತ್ ರಮ್ ರಹೀಂ ಸಿಂಗ್ 20 ವರ್ಷ ಜೈಲು ಶಿಕ್ಷೆಗೆ ಗುರಿಯಾಗಿದ್ದು, ರೋಹ್ಟಕ್‌ನ ಸುನರಿಯಾ ಜೈಲುವಾಸದಲ್ಲಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.