ADVERTISEMENT

ಹಣ ಅಕ್ರಮ ವರ್ಗಾವಣೆ ಪ್ರಕರಣ: ಇ.ಡಿ. ಎದುರು ವಿಚಾರಣೆಗೆ ಹಾಜರಾದ ಉಪಕಾರ್ಯದರ್ಶಿ

ಪಿಟಿಐ
Published 30 ಸೆಪ್ಟೆಂಬರ್ 2021, 8:12 IST
Last Updated 30 ಸೆಪ್ಟೆಂಬರ್ 2021, 8:12 IST
ಪ್ರಾತಿನಿಧಿಕ ಚಿತ್ರ
ಪ್ರಾತಿನಿಧಿಕ ಚಿತ್ರ   

ಮುಂಬೈ: ಮಾಜಿ ಗೃಹ ಸಚಿವ ಮತ್ತು ಇತರರ ವಿರುದ್ಧ ದಾಖಲಾಗಿರುವ ಹಣ ಅಕ್ರಮ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹಾರಾಷ್ಟ್ರ ಗೃಹ ಇಲಾಖೆಯ ಉಪ ಕಾರ್ಯದರ್ಶಿ ಕೈಲಾಶ್ ಗಾಯಕ್‌ವಾಡ್ ಅವರು ಗುರುವಾರ ಜಾರಿ ನಿರ್ದೇಶನಾಲಯದ(ಇ.ಡಿ) ಎದುರು ವಿಚಾರಣೆಗೆ ಹಾಜರಾದರು ಎಂದು ಮೂಲಗಳು ತಿಳಿಸಿವೆ.

ಹಣ ಅಕ್ರಮ ವರ್ಗಾವಣೆ ಪ್ರಕರಣದ ತನಿಖೆಗೆ ಸಂಬಂಧಿಸಿದಂತೆ ವಿಚಾರಣೆಗೆ ಹಾಜರಾಗಲು ಕೈಲಾಶ್ ಗಾಯಕ್‌ವಾಡ್ ಅವರಿಗೆ ಇ.ಡಿ. ಸಮನ್ಸ್‌ ನೀಡಿತ್ತು. ಈ ಹಿನ್ನೆಲೆಯಲ್ಲಿ ಗಾಯಕ್‌ವಾಡ್ ಅವರು ಇಂದು ಬೆಳಿಗ್ಗೆ 11 ಗಂಟೆಗೆ ದಕ್ಷಿಣ ಮುಂಬೈನಲ್ಲಿರುವ ಇ.ಡಿ. ಕಚೇರಿಗೆ ಹಾರಾಗಿದ್ದು, ತನಿಖಾ ಸಂಸ್ಥೆಯ ಅಧಿಕಾರಿಗಳು ಅವರ ಹೇಳಿಕೆಗಳನ್ನು ದಾಖಲಿಸುತ್ತಿ ದ್ದಾರೆ ಎಂದು ಮೂಲಗಳು ತಿಳಿಸಿವೆ.

ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಗಳವಾರ ಮಹಾರಾಷ್ಟ್ರ ಸಾರಿಗೆ ಸಚಿವ ಅನಿಲ್ ಪರಬ್ ಅವರನ್ನು ಸುಮಾರು ಎಂಟು ಗಂಟೆಗಳ ಕಾಲ ಜಾರಿ ನಿರ್ದೇಶನಾಲಯ ವಿಚಾರಣೆ ನಡೆಸಿತ್ತು.

ADVERTISEMENT

ಮಾಜಿ ಗೃಹ ಸಚಿವ ಅನಿಲ್‌ ದೇಶಮುಖ್‌ ಅವರ ರಾಜೀನಾಮೆಗೆ ಕಾರಣವಾದ ಮಹಾರಾಷ್ಟ್ರ ಪೊಲೀಸ್ ಇಲಾಖೆಯಲ್ಲಿ ನಡೆದಿರುವ ₹100 ಕೋಟಿ ಲಂಚ ಮತ್ತು ಸುಲಿಗೆ ಪ್ರಕರಣದ ಬಗ್ಗೆ ಜಾರಿ ನಿರ್ದೇಶನಾಲಯ ತನಿಖೆ ನಡೆಸುತ್ತಿದೆ. ಈ ತನಿಖೆಯ ಭಾಗವಾಗಿ, ಸರ್ಕಾರದ ಅಧಿಕಾರಿಗಳು ಮತ್ತು ಕೆಲವು ಪೊಲೀಸ್ ಅಧಿಕಾರಿಗಳನ್ನು ವಿಚಾರಣೆಗೆ ಒಳಪಡಿಸುತ್ತಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.