ADVERTISEMENT

ನ್ಯಾಯಾಲಯಕ್ಕೆ ಹಾಜರಾಗಿ: ‘ಸುಪ್ರೀಂ’ ಸೂಚನೆ

ಪಿಟಿಐ
Published 1 ಏಪ್ರಿಲ್ 2019, 20:23 IST
Last Updated 1 ಏಪ್ರಿಲ್ 2019, 20:23 IST

ನವದೆಹಲಿ: ಅಸ್ಸಾಂನಲ್ಲಿ ವಿದೇಶಿಗರನ್ನು ಬಂಧನದಲ್ಲಿ ಇರಿಸಿರುವ ಕುರಿತು ವಿದೇಶಿ ಪ್ರಜೆಗಳ ನ್ಯಾಯಮಂಡಳಿ ಯಾವುದೇ ಕ್ರಮ ಕೈಗೊಳ್ಳದೆ ಇರುವ ಬಗ್ಗೆ ಸುಪ್ರೀಂ ಕೋರ್ಟ್ಅಸಮಾಧಾನ ವ್ಯಕ್ತಪಡಿಸಿದೆ.

‘ಸ್ಥಳೀಯರಲ್ಲಿ ಸೇರಿಹೋಗಿರುವ ಎಷ್ಟು ಜನರನ್ನುವಿದೇಶಿಗರು ಎಂದು ಘೋಷಿಸಲಾಗಿದೆ ಎನ್ನುವುದು ತಿಳಿಯಬೇಕಿದೆ. ಆದ್ದರಿಂದ, ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಏ.8ರಂದು ನ್ಯಾಯಾಲಯದ ಎದುರು ಹಾಜರಾಗಬೇಕು’ ಎಂದು ಮುಖ್ಯ ನ್ಯಾಯಮೂರ್ತಿ ರಂಜನ್ ಗೊಗೊಯಿ ನೇತೃತ್ವದ ನ್ಯಾಯಪೀಠ ಸೂಚಿಸಿದೆ.

ಅಸ್ಸಾಂ ಸರ್ಕಾರ ಸಲ್ಲಿಸಿರುವ ಅಫಿಡವಿಟ್ ‘ಪ್ರಯೋಜನವಿಲ್ಲದ್ದು’ ಎಂದು ನ್ಯಾಯಮೂರ್ತಿಗಳಾದ ದೀಪಕ್ ಗುಪ್ತಾ ಹಾಗೂ ಸಂಜೀವ್ ಖನ್ನಾ ಅವರನ್ನೂ ಒಳಗೊಂಡಿರುವ ನ್ಯಾಯಪೀಠ ಅಭಿಪ್ರಾಯಪಟ್ಟಿದೆ.

ADVERTISEMENT

ದೀರ್ಘಕಾಲದಿಂದಬಂಧನ ಕೇಂದ್ರಗಳಲ್ಲಿರುವ ವಿದೇಶಿ ಪ್ರಜೆಗಳ ಸಂಕಷ್ಟ ಕುರಿತು ಸಾಮಾಜಿಕ ಕಾರ್ಯಕರ್ತ ಹರ್ಷ್ ಮಂದರ್ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯವಿಚಾರಣೆ ವೇಳೆ ಈ ಅಭಿಪ್ರಾಯ ವ್ಯಕ್ತಪಡಿಸಿದ ನ್ಯಾಯಪೀಠ, ಮುಂದಿನ ಸೋಮವಾರಕ್ಕೆ ವಿಚಾರಣೆ ನಿಗದಿಪಡಿಸಿತು.

ಅಕ್ರಮ ವಲಸಿಗರನ್ನು ವರ್ಷಗಳಿಂದ ಬಂಧನ ಕೇಂದ್ರದಲ್ಲಿ ಇರಿಸಲಾಗಿರುವ ಕುರಿತು ಸುಪ್ರೀಂ ಕೋರ್ಟ್ ಈ ಹಿಂದೆ ಹಲವು ಬಾರಿ ಕಳವಳವ್ಯಕ್ತಪಡಿಸಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.