ADVERTISEMENT

ಈವರೆಗೆ ಅಮೇಠಿಯಿಂದ ಗೆದ್ದು ಬಂದವರು ಸಂಸತ್ತಿನಲ್ಲಿ ಮೌನವಾಗಿದ್ದರು: ಸ್ಮೃತಿ ಇರಾನಿ

ಪಿಟಿಐ
Published 5 ಡಿಸೆಂಬರ್ 2021, 10:14 IST
Last Updated 5 ಡಿಸೆಂಬರ್ 2021, 10:14 IST
ಸ್ಮೃತಿ ಇರಾನಿ
ಸ್ಮೃತಿ ಇರಾನಿ   

ಅಮೇಠಿ: ಉತ್ತರ ಪ್ರದೇಶದ ಅಮೇಠಿ ಕ್ಷೇತ್ರದೊಂದಿಗೆ ಬಾಂಧವ್ಯ ಹೊಂದಿರುವುದಾಗಿ ಹೇಳಿಕೊಳ್ಳುತ್ತಿರುವ ಕುಟುಂಬವು ಸಂಸತ್ತಿನಲ್ಲಿ ಅಭಿವೃದ್ಧಿ ವಿಚಾರಗಳ ಸಮಸ್ಯೆಗಳ ಬಗ್ಗೆ ಎಂದಿಗೂ ಪ್ರಸ್ತಾಪಿಸಿಲ್ಲ ಎಂದು ಕೇಂದ್ರ ಮಹಿಳಾ ಹಾಗೂ ಮಕ್ಕಳ ಕಲ್ಯಾಣ ಸಚಿವೆ ಸ್ಮೃತಿ ಇರಾನಿ ಭಾನುವಾರ ಹೇಳಿದ್ದಾರೆ.

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಿರುದ್ಧ ಪರೋಕ್ಷ ವಾಗ್ದಾಳಿ ನಡೆಸಿರುವ ಇರಾನಿ, 'ಹಲವಾರು ವರ್ಷಗಳಿಂದ ಅಮೇಠಿ ಸಮಸ್ಯೆಗಳನ್ನು ಎದುರಿಸುತ್ತಿದೆ. ಆದರೆ ಕ್ಷೇತ್ರದಿಂದ ಗೆದ್ದು ಬಂದಿರುವ ವ್ಯಕ್ತಿ ಮೌನವಾಗಿದ್ದಾರೆ' ಎಂದು ಆರೋಪಿಸಿದ್ದಾರೆ.

2019ರ ಲೋಕಸಭಾ ಚುನಾವಣೆಯಲ್ಲಿ ಅಮೇಠಿ ಕ್ಷೇತ್ರದಲ್ಲಿ ರಾಹುಲ್ ಗಾಂಧಿ ವಿರುದ್ಧ ಸ್ಮೃತಿ ಇರಾನಿ ಗೆಲುವು ಗಳಿಸಿದ್ದರು.

'ಅಮೇಠಿಯೊಂದಿಗೆ ಕೌಟುಂಬಿಕ ಬಾಂಧವ್ಯವಿದೆ ಎಂದು ಹೇಳಿಕೊಳ್ಳುವವರು ಸದನದಲ್ಲಿ ಕ್ಷೇತ್ರದ ಅಭಿವೃದ್ಧಿಯ ಬಗ್ಗೆ ಎಂದಿಗೂ ಪ್ರಸ್ತಾಪಿಸಿಲ್ಲ. ಇದರಿಂದಾಗಿ ಅಮೇಠಿ ಕ್ಷೇತ್ರದ ಜನರು ವರ್ಷಗಳಿಂದ ಅಭಿವೃದ್ಧಿಯಿಂದ ವಂಚಿತರಾಗಿದ್ದಾರೆ. ಕಳೆದ ಅನೇಕ ವರ್ಷಗಳಿಂದ ಅಮೇಠಿ ಜನರು ಹಲವಾರು ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ಆದರೆ ಜನರು ಆಯ್ಕೆ ಮಾಡಿ ಕಳುಹಿಸಿದ ವ್ಯಕ್ತಿ ಮೌನವಾಗಿ ಕುಳಿತಿದ್ದಾರೆ' ಎಂದು ಹೇಳಿದರು.

ತಿಲಾಯ್‌ನಲ್ಲಿ ಬಸ್ ನಿಲ್ದಾಣ ಸೇರಿದಂತೆ ಐದು ಕೋಟಿ ರೂಪಾಯಿಗಳ ಅಭಿವೃದ್ಧಿ ಕಾಮಗಾರಿಗಳನ್ನು ಕೇಂದ್ರ ಸಚಿವೆ ಸ್ಮೃತಿ ಇರಾನಿ ಉದ್ಘಾಟಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.