ADVERTISEMENT

ವಿಮಾನಗಳಲ್ಲಿ ಕೋವಿಡ್‌ ನಿಯಮಗಳ ಕಟ್ಟುನಿಟ್ಟಿನ ಜಾರಿಗೆ ಡಿಜಿಸಿಎ ಸೂಚನೆ

​ಪ್ರಜಾವಾಣಿ ವಾರ್ತೆ
Published 17 ಆಗಸ್ಟ್ 2022, 14:51 IST
Last Updated 17 ಆಗಸ್ಟ್ 2022, 14:51 IST

ನವದೆಹಲಿ: ವಿಮಾನಗಳಲ್ಲಿ ಸಂಚರಿಸುವ ಎಲ್ಲ ಪ್ರಯಾಣಿಕರು ಮಾಸ್ಕ್‌ ಧರಿಸುವುದೂ ಸೇರಿದಂತೆ ಕೋವಿಡ್‌–19ರ ಮಾರ್ಗಸೂಚಿಗಳನ್ನು ಕಡ್ಡಾಯವಾಗಿ ಪಾಲಿಸಬೇಕು. ಕೋವಿಡ್‌ ಸಂಬಂಧಿ ನಿಯಮಗಳನ್ನು ಎಲ್ಲ ವಿಮಾನಯಾನ ಸಂಸ್ಥೆಗಳು ಕಟ್ಟುನಿಟ್ಟಾಗಿ ಜಾರಿಗೊಳಿಸಬೇಕು ಎಂದು ನಾಗರಿಕ ವಿಮಾನಯಾನ ನಿರ್ದೇಶನಾಲಯ (ಡಿಜಿಸಿಎ) ಸೂಚಿಸಿದೆ.

ವಿಮಾನಗಳಲ್ಲಿ ಕೋವಿಡ್‌ ಮಾರ್ಗಸೂಚಿ ಪಾಲನೆ ಆಗುತ್ತಿದೆಯೋ ಇಲ್ಲವೋ ಎಂಬುದನ್ನು ತಿಳಿಯಲು ದೇಶದಾದ್ಯಂತ ಸಂಚರಿಸುವ ವಿಮಾನಗಳನ್ನು ‘ರ್‍ಯಾಂಡಮ್‌’ ಆಗಿ ಪರಿಶೀಲಿಸಲಾಗುವುದು ಎಂದು ಡಿಜಿಸಿಎ ಪ್ರಕಟಣೆಯಲ್ಲಿ ತಿಳಿಸಿದೆ.

ಪ್ರಯಾಣಿಕರು ಪ್ರಯಾಣದುದ್ದಕ್ಕೂ ಮಾಸ್ಕ್ ಧರಿಸುವಂತೆ ನೋಡಿಕೊಳ್ಳಬೇಕು. ಈ ಕುರಿತು ಪ್ರಯಾಣಿಕರಲ್ಲಿ ಜಾಗೃತಿ ಮೂಡಿಸಬೇಕು ಎಂದೂ ಅದು ಹೇಳಿದೆ.

ADVERTISEMENT

ದೇಶದಾದ್ಯಂತ ಬುಧವಾರ ಬೆಳಿಗ್ಗೆ 8ಕ್ಕೆ ಕೊನೆಗೊಂಡ 24 ಗಂಟೆಗಳ ಅವಧಿಯಲ್ಲಿ 9,062 ಕೋವಿಡ್‌ ಪ್ರಕರಣಗಳು ದೃಢಪಟ್ಟಿವೆ. ಈ ಅವಧಿಯಲ್ಲಿ 36 ಜನರು ಸೋಂಕಿನಿಂದ ಮೃತಪಟ್ಟಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.