ADVERTISEMENT

ಧರ್ಮಶಾಲಾ: ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್ ಪ್ರತಿಕೃತಿ ದಹಿಸಿ ಪ್ರತಿಭಟನೆ

ಏಜೆನ್ಸೀಸ್
Published 20 ಜೂನ್ 2020, 10:21 IST
Last Updated 20 ಜೂನ್ 2020, 10:21 IST
   

ಧರ್ಮಶಾಲಾ (ಹಿಮಾಚಲ ಪ್ರದೇಶ):ಗಾಲ್ವನ್‌ ಕಣಿವೆಯಲ್ಲಿ ಭಾರತ ಮತ್ತು ಚೀನಾ ಸೇನಾಪಡೆಗಳು ನಡೆಸಿದ ಸಂಘರ್ಷಕ್ಕೆ ಸಂಬಂಧಿಸಿದಂತೆ ಆಕ್ರೋಶ ವ್ಯಕ್ತಪಡಿಸಿರುವ ಇಲ್ಲಿನ ಸ್ಥಳೀಯರು, ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್ ಅವರ ಪ್ರತಿಕೃತಿಗೆ ಬೆಂಕಿ ಹಚ್ಚಿ ಪ್ರತಿಭಟಿಸಿದ್ದಾರೆ.

ಸಂಘರ್ಷದ ವೇಳೆ ಹುತಾತ್ಮರಾದ ಭಾರತದ 20 ಯೋಧರ ಚಿತ್ರಗಳನ್ನು ಹಿಡಿದು ಇಲ್ಲಿರುವಯುದ್ಧ ಸ್ಮಾರಕದ ಬಳಿ ನೆರೆದಿದ್ದ ಜನರು, ಭಾರತ ಸೇನೆ ಪರ ಘೋಷಣೆಗಳನ್ನು ಕೂಗಿದ್ದಾರೆ. ಮಾತ್ರವಲ್ಲದೆ ಚೀನಾದ ಸರಕುಗಳನ್ನು ಬಹಿಷ್ಕರಿಸುವಂತೆ ಆಗ್ರಹಿಸಿದ್ದಾರೆ.

ಇದೇ ರೀತಿ ಅಹಮದಾಬಾದ್‌ನಲ್ಲಿಯೂ ಜಿನ್‌ಪಿಂಗ್‌ ಪ್ರತಿಕೃತಿಗೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಲಾಗಿದೆ. ತೆಲಂಗಾಣದಲ್ಲೂ ಚೀನಾ ವಿರುದ್ಧ ಘೋಷಣೆ ಕೂಗಿ ಪ್ರತಿಭಟಿಸಲಾಗಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.