ADVERTISEMENT

ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆಗೆ ಕಾರಣ ನೀಡಿದ ಧರ್ಮೇಂದ್ರ ಪ್ರಧಾನ್

ಏಜೆನ್ಸೀಸ್
Published 23 ಫೆಬ್ರುವರಿ 2021, 14:38 IST
Last Updated 23 ಫೆಬ್ರುವರಿ 2021, 14:38 IST
ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್
ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್   

ನವದೆಹಲಿ: ಪೆಟ್ರೋಲ್ ಹಾಗೂ ಡೀಸೆಲ್ ಬೆಲೆ ದಿನಂದಿನ ದಿನಕ್ಕೆ ಏರುತ್ತಲೇ ಇದೆ. ಈ ಮಧ್ಯೆ ಹೇಳಿಕೆ ನೀಡಿರುವ ಕೇಂದ್ರ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವ ಧರ್ಮೇಂದ್ರ ಪ್ರಧಾನ್, ಅಂತರ ರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲ ಬೆಲೆ ಏರಿಕೆಯಿಂದಾಗಿ ದೇಶದಲ್ಲಿ ಇಂಧನ ಬೆಲೆ ಏರಿಕೆಯಾಗುತ್ತಿದೆ ಎಂದು ಸ್ಪಷ್ಟನೆ ನೀಡಿದ್ದಾರೆ.

ಅಂತರ ರಾಷ್ಟ್ರೀಯ ಮಾರುಕಟ್ಟೆಗಳಲ್ಲಿ ಕಚ್ಚಾ ತೈಲದ ಬೆಲೆ ಹೆಚ್ಚಳದಿಂದಾಗಿ ಪೆಟ್ರೋಲ್ ಹಾಗೂ ಡೀಸೆಲ್ ಬೆಲೆ ಏರಿಕೆಯಾಗಿದೆ. ಇದು ಕ್ರಮೇಣ ಕಡಿಮೆಯಾಗಲಿದೆ ಎಂದು ಆಶ್ವಾಸನೆ ನೀಡಿದರು.

ಕೋವಿಡ್-19 ಇಂಧನ ಉತ್ಪಾದನೆ ಮೇಲೆ ಪರಿಣಾಮ ಬೀರುತ್ತಿರುವುದರಿಂದ ಜಾಗತಿಕ ಪೂರೈಕೆಯೂ ಕುಸಿದಿದೆ ಎಂದು ಸಚಿವರು ತಿಳಿಸಿದರು.

ADVERTISEMENT

ಪೆಟ್ರೋಲಿಯಂ ಉತ್ಪನ್ನಗಳನ್ನು ಜಿಎಸ್‌ಟಿ ವ್ಯಾಪಿಗೆ ತರಲು ಜಿಎಸ್‌ಟಿ ಕೌನ್ಸಿಲ್‌ಗೆ ನಿರಂತರವಾಗಿ ವಿನಂತಿಸುತ್ತಿದ್ದೇವೆ. ಇದರಿಂದ ಜನರಿಗೆ ಅನುಕೂಲವಾಗಲಿದೆ ಎಂದು ತಿಳಿಸಿದರು.

ಇಂಧನ ಬೆಲೆ ಏರಿಕೆ ವಿರುದ್ಧ ಕೇಂದ್ರ ಸರ್ಕಾರವನ್ನು ದೂರಿರುವ ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ವಿರುದ್ಧ ಧಮೇಂದ್ರ ಪ್ರಧಾನ್ ವಾಗ್ದಾಳಿ ನಡೆಸಿದರು.

ರಾಜಸ್ಥಾನ ಹಾಗೂ ಮಹಾರಾಷ್ಟ್ರದಲ್ಲಿ ಗರಿಷ್ಠ ತೆರಿಗೆಯಿದೆ ಎಂಬುದು ಸೋನಿಯಾಗೆ ತಿಳಿದಿರಬೇಕು. ಲಾಕ್‌ಡೌನ್ ಸಮಯದಲ್ಲಿ ಕೇಂದ್ರ ಹಾಗೂ ರಾಜ್ಯ ಗಳಿಕೆಯು ಕುಸಿದಿದೆ. ಉದ್ಯೋಗಗಳನ್ನು ಹೆಚ್ಚಿಸಲು ಬಜೆಟ್‌ನಲ್ಲಿ ವಿವಿಧ ಕ್ಷೇತ್ರಗಳಿಗೆ ಹೆಚ್ಚಿನ ಹಂಚಿಕೆ ನೀಡಿದ್ದೇವೆ ಎಂದು ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.