ನವದೆಹಲಿ: ಮುಂಬರುವ ಕರ್ನಾಟಕ ವಿಧಾನಸಭೆ ಚುನಾವಣೆಗೆ ತನ್ನ ಉಸ್ತುವಾರಿಯನ್ನಾಗಿ ಧರ್ಮೇಂದ್ರ ಪ್ರಧಾನ್ ಹಾಗೂ ಸಹ ಉಸ್ತುವಾರಿಯನ್ನಾಗಿ ಕೆ.ಅಣ್ಣಾಮಲೈ ಅವರನ್ನು ಬಿಜೆಪಿ ನೇಮಿಸಿದೆ.
ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಅವರ ಸಲಹೆಯಂತೆ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಅರುಣ್ ಸಿಂಗ್ ಶನಿವಾರ ಈ ನೇಮಕದ ಆದೇಶವನ್ನು ಹೊರಡಿಸಿದ್ದಾರೆ.
ಈ ಆದೇಶ ತಕ್ಷಣದಿಂದಲೇ ಜಾರಿಗೆ ಬರಲಿದೆ. ಧರ್ಮೇಂದ್ರ ಪ್ರಧಾನ್ ಅವರು ಪ್ರಸ್ತುತ ಕೇಂದ್ರ ಶಿಕ್ಷಣ ಮಂತ್ರಿಯಾಗಿದ್ದಾರೆ. ಕರ್ನಾಟಕ ಕೇಡರ್‌ನ ಐಪಿಎಸ್ ಅಧಿಕಾರಿಯಾಗಿದ್ದ ಕೆ.ಅಣ್ಣಾಮಲೈ ಅವರು ಪ್ರಸ್ತುತ ತಮಿಳುನಾಡು ಬಿಜೆಪಿ ಅಧ್ಯಕ್ಷರಾಗಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.