ನವದೆಹಲಿ: ಅಕ್ಟೋಬರ್ 17ರಂದು ನಡೆಯಲಿರುವ ಕಾಂಗ್ರೆಸ್ ಅಧ್ಯಕ್ಷೀಯ ಚುನಾವಣೆಗೆ ನಾಮಪತ್ರ ಸಲ್ಲಿಸಲು ಕಾಂಗ್ರೆಸ್‌ನ ಹಿರಿಯ ನಾಯಕ ದಿಗ್ವಿಜಯ್ ಸಿಂಗ್ ನಿರ್ಧರಿಸಿದ್ದಾರೆ.
ಇಂದು ರಾತ್ರಿಯೇ ಅವರು ರಾಜಧಾನಿ ದೆಹಲಿಗೆ ತಲುಪಲಿದ್ಧಾರೆ.
ಚುನಾವಣೆಯಲ್ಲಿ ಸ್ಪರ್ಧಿಸುವುದು ಅವರ ಸ್ವಂತ ನಿರ್ಧಾರವಾಗಿದ್ದು, ಗಾಂಧಿ ಕುಟುಂಬದಿಂದ ಅವರಿಗೆ ಯಾವುದೇ ಸೂಚನೆ ಬಂದಿಲ್ಲ ಎಂದು ಅವರ ಆಪ್ತ ಮೂಲಗಳು ತಿಳಿಸಿವೆ.
ಸೆಪ್ಟೆಂಬರ್ 30ರಂದು ಮಧ್ಯಪ್ರದೇಶದ ಮಾಜಿ ಮುಖ್ಯಮಂತ್ರಿ ದಿಗ್ವಿಜಯ್ ಸಿಂಗ್ ನಾಮಪತ್ರ ಸಲ್ಲಿಸಲಿದ್ದಾರೆ.
ಕಾಂಗ್ರೆಸ್ ಅಧ್ಯಕ್ಷೀಯ ಚುನಾವಣೆಯಲ್ಲಿ ರಾಜಸ್ಥಾನ ಮುಖ್ಯಮಂತ್ರಿ ಅಶೋಕ್ ಗೆಹಲೋತ್ ಅವರನ್ನು ಕಣಕ್ಕಿಳಿಸುವುದು ಗಾಂಧಿ ಕುಟುಂಬದ ನಿರ್ಧಾರವಾಗಿತ್ತು. ಆದರೆ, ಈ ಮಧ್ಯೆ ರಾಜಸ್ಥಾನಕ್ಕೆ ಹೊಸ ಮುಖ್ಯಮಂತ್ರಿ ಆಯ್ಕೆಗಾಗಿ ನಡೆಯಬೇಕಿದ್ದ ಪಕ್ಷದ ಶಾಸಕಾಂಗ ಸಭೆ ಧಿಕ್ಕರಿಸಿ ಬಂಡಾಯ ಶಾಸಕರು ಮತ್ತೊಂದು ಸಭೆ ನಡೆಸಿ, ಗೆಹಲೋತ್ ಪಕ್ಷದ ಅಧ್ಯಕ್ಷ ಹುದ್ದೆ ಅಲಂಕರಿಸುವುದರ ವಿರುದ್ಧ ತಮ್ಮ ಅಸಮಾಧಾನ ತೋರ್ಪಡಿಸಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.