ADVERTISEMENT

ನ್ಯಾ.ದಿನೇಶ್‌ ಮಾಹೇಶ್ವರಿ, ಸಂಜೀವ್‌ ಖನ್ನಾ ಪ್ರಮಾಣ ವಚನ

ಪಿಟಿಐ
Published 18 ಜನವರಿ 2019, 19:54 IST
Last Updated 18 ಜನವರಿ 2019, 19:54 IST

ನವದೆಹಲಿ: ನ್ಯಾ.ದಿನೇಶ್‌ ಮಾಹೇಶ್ವರಿ ಹಾಗೂ ಸಂಜೀವ್‌ ಖನ್ನಾ ಅವರುಶುಕ್ರವಾರ ಸುಪ್ರೀಂ ಕೋರ್ಟ್‌ ನ್ಯಾಯಮೂರ್ತಿಗಳಾಗಿ ಪ್ರಮಾಣ ವಚನ ಸ್ವೀಕರಿಸಿದರು.

ಸುಪ್ರೀಂಕೋರ್ಟ್ ಆವರಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮುಖ್ಯ ನ್ಯಾಯಮೂರ್ತಿ (ಸಿಜೆಐ) ರಂಜನ್‌ ಗೊಗೊಯಿ ಅವರು ಪ್ರಮಾಣ ವಚನ ಬೋಧಿಸಿದರು.

ಸುಪ್ರೀಂ ಕೋರ್ಟ್‌ಗೆ ಮಂಜೂರಾಗಿರುವ ನ್ಯಾಯಮೂರ್ತಿಗಳ ಸಂಖ್ಯೆ ಒಟ್ಟು 31.

ADVERTISEMENT

ದಿನೇಶ್‌ ಮಾಹೇಶ್ವರಿ ಹಾಗೂ ಖನ್ನಾ ಅವರ ಸೇರ್ಪಡೆಯಿಂದ ನ್ಯಾಯಮೂರ್ತಿಗಳ ಸಂಖ್ಯೆ 28ಕ್ಕೆ ಏರಿಕೆಯಾಗಿದೆ.

ನ್ಯಾ.ದಿನೇಶ್‌ ಮಾಹೇಶ್ವರಿ ಅವರು ಕರ್ನಾಟಕ ಹೈಕೋರ್ಟ್‌ನ ಮುಖ್ಯ ನ್ಯಾಯಮೂರ್ತಿಯಾಗಿದ್ದರು. ನ್ಯಾ. ಸಂಜೀವ್‌ ಖನ್ನಾ ಅವರು ದೆಹಲಿ ಹೈಕೋರ್ಟ್‌ನನ್ಯಾಯಮೂರ್ತಿಯಾಗಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.