ADVERTISEMENT

BRS ಶಾಸಕರನ್ನು ಅನರ್ಹಗೊಳಿಸಲು ವಿಳಂಬ: ತೀರ್ಪು ಕಾಯ್ದಿರಿಸಿದ ಸುಪ್ರೀಂ ಕೋರ್ಟ್

ಪಿಟಿಐ
Published 3 ಏಪ್ರಿಲ್ 2025, 12:56 IST
Last Updated 3 ಏಪ್ರಿಲ್ 2025, 12:56 IST
ಸುಪ್ರೀಂ ಕೋರ್ಟ್
ಸುಪ್ರೀಂ ಕೋರ್ಟ್   

ನವದೆಹಲಿ: ಕಾಂಗ್ರೆಸ್‌‌ಗೆ ಪಕ್ಷಾಂತರಗೊಂಡ ಬಿಆರ್‌ಎಸ್‌ ಶಾಸಕರನ್ನು ಅನರ್ಹಗೊಳಿಸುವ ಬಗ್ಗೆ ನಿರ್ಧಾರ ತೆಗೆದುಕೊಳ್ಳಲು ತೆಲಂಗಾಣ ವಿಧಾನಸಭೆಯ ಸ್ಪೀಕರ್‌ ವಿಳಂಬ ಮಾಡುತ್ತಿದ್ದಾರೆ ಎಂಬುದರ ಕುರಿತು ಸಲ್ಲಿಸಲಾಗಿದ್ದ ಅರ್ಜಿಗಳ ಕುರಿತು ವಿಚಾರಣೆಯನ್ನು ಸುಪ್ರೀಂ ಕೋರ್ಟ್‌ ಗುರುವಾರ ಪೂರ್ಣಗೊಳಿಸಿದೆ.

ನ್ಯಾಯಮೂರ್ತಿಗಳಾದ ಬಿ.ಆರ್‌. ಗವಾಯಿ ಮತ್ತು ಅಗಸ್ಟೀನ್‌ ಜಾರ್ಜ್‌ ಮಸೀಹ್‌ ಅವರಿದ್ದ ಪೀಠವು ಈ ಸಂಬಂಧ ತೀರ್ಪನ್ನು ಕಾಯ್ದಿರಿಸಿದೆ. ‘ಶಾಸಕರನ್ನು ಅನರ್ಹಗೊಳಿಸುವ ಬಗ್ಗೆ ‘ಸೂಕ್ತಸಮಯದ ಒಳಗೆ’ ನಿರ್ಧರಿಸಿ’ ಎಂದು ಹೈಕೋರ್ಟ್‌ ಆದೇಶ ನೀಡಿತ್ತು. ಇದರ ವಿರುದ್ಧ ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿಗಳನ್ನು ಸಲ್ಲಿಸಲಾಗಿತ್ತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT